LATEST NEWS
ವಿಜಯೋತ್ಸವಕ್ಕೆ ಜಿಲ್ಲಾಧಿಕಾರಿಯಿಂದ ನಿಷೇಧ

ವಿಜಯೋತ್ಸವಕ್ಕೆ ಜಿಲ್ಲಾಧಿಕಾರಿಯಿಂದ ನಿಷೇಧ
ಮಂಗಳೂರು ಮೇ 13: ಮೇ 15 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೇ 15 ರಿಂದ ಜಿಲ್ಲೆಯಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮೇ 14ರ ಮಧ್ಯರಾತ್ರಿಯಿಂದ ಮೇ 15 ರ ಮಧ್ಯರಾತ್ರಿಯವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಕೋಮುಗಲಭೆಯಾಗುವ ಮುನ್ನೆಚ್ಚರಿಕೆಯಿಂದ ಜಿಲ್ಲಾಧಿಕಾರಿ ಈ ಆದೇಶ ನೀಡಿದ್ದಾರೆ.

ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ವಿಜಯೋತ್ಸವ ಭಾಗ್ಯ ಇಲ್ಲದಂತಾಗಿದೆ. ಆದೇಶ ಮೀರಿ ವಿಜಯೋತ್ಸವ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.