Connect with us

  KARNATAKA

  ಕೋಮುವಾದಿಗಳ ಜೊತೆ ರಾಜಿ ಇಲ್ಲ : ಸಿಎಂ ಸಿದ್ದರಾಮಯ್ಯ..!

  ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

  ಮೈಸೂರು : ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

  ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಸಿದ್ದರಾಮಯ್ಯನವರು ಹಿಂದೆ ಬಿಜೆಪಿ ಪಕ್ಷಕ್ಕೆ ಹೋಗಲು ಪ್ರಯತ್ನಿಸಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು.

  ನನ್ನ ರಾಜಕೀಯ ಜೀವನದಲ್ಲಿ ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆ.

  ಅವರು ಕುಟುಂಬ ರಾಜಕಾರಣಕ್ಕಾಗಿ ಬಿಜೆಪಿಯವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ

  ಬೆಂಗಳೂರಿನ ಖಾಸಗಿ ಸಾರಿಗೆಯವರು ನಡೆಸುತ್ತಿರುವ ಮುಷ್ಕರದ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮುಷ್ಕರ ಮಾಡುವವರಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ.

  ಖಾಸಗಿ ಸಾರಿಗೆಯವರ ಅಹವಾಲುಗಳನ್ನು ಸರ್ಕಾರ ಆಲಿಸಿದೆ. ಶಕ್ತಿಯೋಜನೆಯಿಂದ ಖಾಸಗಿ ಸಾರಿಗೆಯವರಿಗೆ ನಷ್ಟವುಂಟಾಗುತ್ತಿದ್ದು, ಆ ನಷ್ಟವನ್ನು ಭರಿಸಿಕೊಡಬೇಕು ಎಂಬಂತಹ ಅಸಾಧ್ಯ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ. ಹೆಣ್ಣುಮಕ್ಕಳಿಗೆ ಅನುಕೂಲ ಕಲ್ಪಿಸಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ ಎಂದರು..

  ಒಂದು ರಾಷ್ಟ್ರ ,ಒಂದು ಚುನಾವಣೆ ಕಾರ್ಯತ: ಅಸಾಧ್ಯ :

  ದೇಶದಲ್ಲಿ ಒಂದು ರಾಷ್ಟ್ರ ,ಒಂದು ಚುನಾವಣೆ ಯ ಅಗತ್ಯವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಒಂದು ರಾಷ್ಟ್ರ , ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ: ಸಾಧ್ಯವಿಲ್ಲ.

  ಕೆಲವು ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ಚುನಾವಣೆ ನಡೆದಿದೆ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ ರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲು ಸಾಧ್ಯವಿದೆಯೇ ? ಅಥವಾ ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಅಧಿಕಾರ ಹೇರಲು ಸಾಧ್ಯವಿದೆಯೇ ? ಇಂತಹ ಸಂದರ್ಭಗಳು ಉದ್ಭವಿಸುವ ಸಾಧ್ಯತೆಯಿಂದಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ: ಸಾಧ್ಯವಿಲ್ಲ.

  ಕರ್ನಾಟಕದ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಿಂದಾಗಿ ಪ್ರಧಾನಿಗಳು ಹತಾಶರಾಗಿದ್ದು, ನಾಲ್ಕೈದು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿರುವುದಿಲ್ಲ ಎಂದರು.

  Share Information
  Advertisement
  Click to comment

  You must be logged in to post a comment Login

  Leave a Reply