ಬಜೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ – ರೇವಣ್ಣ
ಮಂಗಳೂರು ಜೂನ್ 19: ಬಜೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ, ಈ ಬಾರಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತೇವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಉಜರೆಯ ಶಾತಿನವಕ್ಕೆ ತೆರಳಿ ಸಿದ್ಧರಾಮಯ್ಯನವರ ಆರೋಗ್ಯ ವಿಚಾರಿಸಿದ್ದೇನೆ. ಚಾರ್ಮಾಡಿಗೆ ಭೇಟಿ ನೀಡಿ ಬರುತ್ತಿದ್ದ ವೇಳೆ ಸಿದ್ಧರಾಮಯ್ಯರ ಜತೆ ಮಾತನಾಡಿದ್ದೇನೆ ಅಷ್ಟೆ. ಅದರಲ್ಲಿ ವಿಶೇಷವೇನು ಇಲ್ಲ. ಸಿದ್ಧರಾಮಯ್ಯನವರ ಆರೋಗ್ಯ ಚೆನ್ನಾಗಿದ್ದು, ಅವರು ಆರು ತಿಂಗಳಿಗೊಮ್ಮೆ ಇಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮ ಭೇಟಿ ಸ್ನೇಹಕ್ಕೆ ಮಾತ್ರ ಸೀಮಿತ ಹೊರತು ರಾಜಕೀಯ ವಿಚಾರ ಇಲ್ಲಿ ಚರ್ಚೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಬಜೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ನಾವು ಈ ಬಾರಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತೇವೆ. ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಮಂಡಿಸಲಿರುವ ಬಜೆಟ್ ಗೆ ಸಿದ್ಧರಾಮಯ್ಯನರಿಗೆ ಯಾವುದೇ ಅಸಮಾಧಾನವಿಲ್ಲ. ಬಜೆಟ್ ಮಂಡನೆಗೆ ಅವರು ಸಮ್ಮತಿಸಿದ್ದಾರೆ ಎಂದು ಅವರು ಹೇಳಿದರು.