Connect with us

    LATEST NEWS

    ಮಂಗಳೂರು – 2 ತಿಂಗಳು ವಿಧ್ಯಾಸಂಸ್ಥೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಿ

    ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ರ 3 ನೇ ಅಲೆಯ ಭೀತಿಯನ್ನು ಸಮರ್ಪಕವಾಗಿ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗೃತಿ ಕ್ರಮಗಳ ಕುರಿತು ಮಹಾನಗರಪಾಲಿಕೆಯ ವ್ಯಾಪ್ತಿಯ ಮೆಡಿಕಲ್, ಡೆಂಟಲ್, ಇಂಜಿನಿಯರಿಂಗ್ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರೊಂದಿಗೆ ಇಂದು ಸಭೆ ನಡೆಯಿತು. ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಜರುಗಿದ್ದು ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.


    ಮಂಗಳೂರು ನಗರಕ್ಕೆ ಪ್ರವೇಶಿಸುವ ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್ ಟೆಸ್ಟನ್ನು ಮಾಡತಕ್ಕದ್ದು, ಬಂದು ಏಳು ದಿನ ಕಳೆದ ಕೂಡಲೇ ಮಗದೊಮ್ಮೆ ಆರ್.ಟಿ.ಪಿ.ಸಿ.ಆರ್ ಟೆಸ್ಟನ್ನು ಕಡ್ಡಾಯವಾಗಿ ಮಾಡಲೇಬೇಕು. ಶಾಲಾ ಕಾಲೇಜುಗಳಲ್ಲಿ ಪ್ರಸ್ತುತ ಜರಗುವ ಎಲ್ಲಾ ಸಾಂಸ್ಕøತಿಕ ಕಾರ್ಯಕ್ರಮಗಳನ್ನು 2 ತಿಂಗಳವರೆಗೆ ಮುಂದೂಡಬೇಕು. ಕಾಲೇಜುಗಳಲ್ಲಿ ಜರಗುವ ವಿವಿಧ ಕಾರ್ಯಾಗಾರ, ಸಮ್ಮೇಳನ ಹಾಗೂ ವಿಚಾರ ಗೋಷ್ಠಿಯನ್ನು ವರ್ಚುವಲ್ ಮೋಡ್ ಮುಖಾಂತರ ನಡೆಸಬೇಕು.

    ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವ ಸಾರ್ವಜನಿಕರು / ವಿದ್ಯಾರ್ಥಿಗಳು ಕಡ್ಡಾಯವಾಗಿ 72 ಗಂಟೆ ಮೀರದ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ರಿಪೋರ್ಟನ್ನು ಹಾಜರುಪಡಿಸಬೇಕು. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಿಂದ ಬರುವ ಮೆಡಿಕಲ್ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಮತ್ತು ಇತರ ವಿದ್ಯಾರ್ಥಿಗಳು ಡಿಸಂಬರ್ 12 ರಿಂದ 27ರೊಳಗೆ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್ ಟೆಸ್ಟನ್ನು ಮಾಡಿಸಬೇಕು.

    ಒಂದು ವೇಳೆ ಯಾವುದೇ ಕಾಲೇಜುಗಳಲ್ಲಿ ಒಮ್ಮಿಂದೊಮ್ಮೆಗೆ ಹಲವಾರು ಮಂದಿಗೆ ಕೊರೊನಾ ಪಾಸಿಟಿವ್ ಬಂದಲ್ಲಿ ಆ ವಿದ್ಯಾರ್ಥಿಗಳಿಗೆ ಕೊರೊನಾ ಮಾರ್ಗಸೂಚಿಯಂತೆ ಸೂಕ್ತ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳುವುದು ಹಾಗೂ ಅವರೊಂದಿಗೆ ಸಂಪರ್ಕವಿದ್ದ ಕೊರೊನಾ ನೆಗೆಟಿವ್ ವರದಿ ಬಂದ ವಿದ್ಯಾರ್ಥಿಗಳಿಗೆ 7 ದಿನಗಳವರೆಗೆ ಕ್ವಾರಂಟೈನ್‍ನಲ್ಲಿ ಇರಿಸುವಂತೆ ಕ್ರಮಕೈಗೊಂಡು 7 ದಿನಗಳ ನಂತರ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಿ ನೆಗೆಟಿವ್ ರಿಪೋರ್ಟನ್ನು ಪಡೆಯಬೇಕು.

    ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಪಿ.ಜಿ ಗಳಲ್ಲಿ ವಾಸ್ತವ್ಯವಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆಯಾಯ ಕಾಲೇಜಿನ ಮುಖ್ಯಸ್ಥರು ಪಾಲಿಕೆಗೆ ಕಡ್ಡಾಯವಾಗಿ ನೀಡಬೇಕು. ಪ್ರತೀ ಕಾಲೇಜುಗಳಲ್ಲಿ ಕಡ್ಡಾಯವಾಗಿ ಮಾಸ್ಟರ್ ನೋಡಲ್ ಆಫಿಸರ್ ಮತ್ತು ನೋಡಲ್ ಆಫಿಸರನ್ನು ನೇಮಿಸಿ ಕೊರೊನಾಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇದ್ದರು ಅವರ ಕಾಲೇಜು ವ್ಯಾಪ್ತಿಗೆ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಬೇರೆ ರಾಜ್ಯಕ್ಕೆ ತೆರಳುವ ವಿದ್ಯಾರ್ಥಿಗಳು ಶಾಲಾ ಕಾಲೇಜು ಮುಖ್ಯಸ್ಥರ ಅನುಮತಿಯನ್ನು ಪಡೆದು ತೆರಳಬೇಕು.

    Share Information
    Advertisement
    Click to comment

    You must be logged in to post a comment Login

    Leave a Reply