Connect with us

    BELTHANGADI

    ಬೆಂದ್ರಾಳ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಕರೆ ಮಾಹಿತಿ ದೃಢಪಟ್ಟಿಲ್ಲ – ಎಸ್ಪಿ ಸ್ಪಷ್ಟನೆ

    ಬೆಳ್ತಂಗಡಿ, ನವೆಂಬರ್ 27: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವರದಿಗಳಿಗೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ಸ್ಪಷ್ಟನೆ ನೀಡಿದ್ದಾರೆ.


    ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ, ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎನ್ನುವ ವದಂತಿ ಹರಡಿದ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆದರೆ ಇಲ್ಲಿಂದ ಯಾವುದೇ ಸ್ಯಾಟ್ ಲೈಟ್ ಕರೆ ಹೋಗಿರುವ ಮಾಹಿತಿ ದೃಢಪಟ್ಟಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.ಬೆಂದ್ರಾಳ ಪ್ರದೇಶದ ಅರಣ್ಯದಲ್ಲಿ ಸ್ಪೋಟದ ಶಬ್ದ ಕೇಳಿಸಿದೆ ಎಂಬ ವದಂತಿ ಹರಡುತ್ತಿದೆ. ಈ ಬಗ್ಗೆಯೂ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಪ್ರದೇಶದಲ್ಲಿ ಕಾಡಾನೆಗಳ ಉಪಟಳ ಅತ್ಯಂತ ಹೆಚ್ಚಾಗಿದೆ. ಅವುಗಳನ್ನು ಓಡಿಸಲು ಸ್ಥಳೀಯರು ಅರಣ್ಯ ಇಲಾಖೆ ನೀಡುವ ಪಟಾಕಿಗಳನ್ನು ಉಪಯೋಗಿಸುತ್ತಿದ್ದು, ಅದರ ಶಬ್ದವೇ ಆಗಿರಬಹುದು ಎಂಬ ಮಾಹಿತಿ ಪೊಲೀಸರ ಪರಿಶೀಲನೆಯ ಸಂದರ್ಭದಲ್ಲಿ ಕಂಡುಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

     

    Share Information
    Advertisement
    Click to comment

    Leave a Reply

    Your email address will not be published. Required fields are marked *