Connect with us

  LATEST NEWS

  ಅಯೋಧ್ಯೆ ರಾಮಲಲ್ಲಾ ಗರ್ಭಗುಡಿಯಲ್ಲಿ ಮಳೆನೀರು ಸೋರಿಕೆ – ದೇಗುಲದ ಪ್ರಧಾನ ಆರ್ಚಕರ ಆತಂಕ!

  ಅಯೋಧ್ಯೆ ಜೂನ್ 25 : ಅಯೋಧ್ಯೆ ರಾಮಮಂದಿರದ ರಾಮಲಲ್ಲಾನ ಗರ್ಭಗುಡಿಯಲ್ಲಿ ಮೊದಲ ಮಳೆಗೆ ನೀರು ಸೋರುತ್ತಿದೆ ಎಂದು ಪ್ರಧಾನ ಆರ್ಚಕರು ಆತಂಕ ವ್ಯಕ್ತಪಡಿಸಿದ್ದಾರೆ. ಚುನಾವಣೆಗಾಗಿ ಗಡಿಬಿಡಿಯಲ್ಲಿ ಅಯೋಧ್ಯೆರಾಮಮಂದಿರ ಉದ್ಘಾಟನೆ ಮಾಡಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರಕ್ಕೆ ಇದೀಗ ಅಯೋಧ್ಯೆ ರಾಮಮಂದಿರದ ಕಾಮಗಾರಿಗೆ ಬಗ್ಗೆ ತಲೆಕೆ಼ಡಿಸಿಕೊಳ್ಳುವ ಸ್ಥಿತಿ ಬಂದಿದೆ.


  ಜನವರಿ 22 ರಂದು ಪ್ರಾಣ ಪ್ರತಿಷ್ಠೆಯಾಗಿ ಲೋಕಾರ್ಪಣೆಯಾದ ಅಯೋಧ್ಯೆ ರಾಮಮಂದಿರದ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ಮಂದಿರ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
  ರಾಮ ಮಂದಿರವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾದ ನಂತರದಲ್ಲಿ ಸುರಿದ ಮೊದಲ ಭಾರಿ ಮಳೆಯ ಸಂದರ್ಭದಲ್ಲಿ ಗರ್ಭಗುಡಿಯಲ್ಲಿ ನೀರು ಸೋರುತ್ತಿದೆ. ಮಂದಿರದ ನಿರ್ಮಾಣದ ವೇಳೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ್ದಾರೆ.
  ಶನಿವಾರ ಮಧ್ಯರಾತ್ರಿ ಮಳೆ ಸುರಿಯಿತು, ಮಂದಿರದ ಆವರಣದಲ್ಲಿ ಬಿದ್ದ ಮಳೆನೀರು ಹರಿದುಹೋಗಲು ಸೂಕ್ತವಾದ ವ್ಯವಸ್ಥೆ ಇರಲಿಲ್ಲ, ಮಂದಿರದ ಆಡಳಿತದ ಹೊಣೆ ಹೊತ್ತಿರುವವರು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply