Connect with us

  LATEST NEWS

  ಮಂಗಳೂರು – ಮುಖ್ಯಮಂತ್ರಿಗಳ ಪ್ರವಾಸ ಹಿನ್ನಲೆ ಡ್ರೋನ್ ಹಾರಾಟ ನಿಷೇಧ

  ಮಂಗಳೂರು,ಫೆಬ್ರವರಿ 16- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ.


  ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 17 ರಂದು ಶನಿವಾರ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯನ್ನು ಹಾಗೂ ವಾಮಂಜೂರಿನ ತಿರುವೈಲಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯನ್ನು ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ ಆ ಪ್ರದೇಶದಲ್ಲಿ ಯಾವುದೇ ಮಾದರಿಯ ಡ್ರೋನ್ ಹಾರಾಟ ಬಳಕೆ ಮತ್ತು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಮಂಗಳೂರು ನಗರ ಪೆÇಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಆದೇಶಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply