LATEST NEWS
ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿಗೆ ಉಡುಪಿಗೆ ನೋ ಎಂಟ್ರಿ

ಉಡುಪಿ ಜುಲೈ 07: ದಾವಣಗೆರೆಯ ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಅವರು ಎರಡು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ ಹೇರಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಭಾನುವಾರ ಆದೇಶಿಸಿದ್ದಾರೆ.
ಹಿಂದೂ ಜಾಗರಣ ವೇದಿಕೆ ವತಿಯಿಂದ ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಕಾರ್ಕಳ, ಕುಂದಾಪುರ, ಉಡುಪಿ ತಾಲ್ಲೂಕುಗಳಲ್ಲಿ ಪ್ರತಿಭಟನೆ ಆಯೋಜಿಸಿದ್ದು, ಅದರಂತೆ ಇದೇ 7ರಂದು ಸಂಜೆ 4 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಪ್ರತಿಭಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಬರುವ ಭಾಷಣಗಾರರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಪ್ರಮುಖ ಭಾಷಣಗಾರರನ್ನಾಗಿ ರೌಡಿ ಶೀಟರ್ ಸತೀಶ್ ಪೂಜಾರಿ ಅವರನ್ನು ರಹಸ್ಯವಾಗಿ ಕರೆಸಿ ಸಮಾಜದ ಸ್ವಾಸ್ಥ್ಯ ಕದಡುವ ಸಾಧ್ಯತೆ ಇರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದಲ್ಲದೆ ಜಿಲ್ಲೆಯ ಕಾರ್ಕಳ, ಕುಂದಾಪುರ ತಾಲ್ಲೂಕುಗಳಲ್ಲಿಯೂ ಮುಂದಿನ ದಿನಗಳಲ್ಲಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಹಲವಾರು ಪ್ರತಿಭಟನೆಗಳನ್ನು ಹಮ್ಮಿಕೊಂಡು ಅಲ್ಲಿಯೂ ಸಹ ಸತೀಶ ಪೂಜಾರಿಯನ್ನು ಕರೆಸಿ ಕೋಮು ಪ್ರಚೋಚಕ ಭಾಷಣ ಮಾಡಿಸಿ, ಗಲಭೆ ಎಬ್ಬಿಸುವ ಹುನ್ನಾರ ಮಾಡಿರುವುದು ರಹಸ್ಯ ವರದಿಯಿಂದ ತಿಳಿದು ಬಂದಿರುವುದಾಗಿ ಹೇಳಲಾಗಿದೆ.
3 Comments