Connect with us

    LATEST NEWS

    ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ

    ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ

    ಮಂಗಳೂರು, ಮೇ 11 : ವಂದೇ ಭಾರತ್ ಮಿಷನ್ ಅನ್ವಯ ಕೊರೊನಾದಿಂದ ದುಬೈಯಲ್ಲಿ ಸಿಲುಕಿರುವ ಭಾರತೀಯರನ್ನು ಕರೆದುಕೊಂಡು ಎರ್ ಇಂಡಿಯಾ ನಾಳೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದೆ. ಈ ಹಿನ್ನಲೆ ಜಿಲ್ಲೆಗೆ ಆಗಮಿಸಲಿರುವ ಪ್ರಯಾಣಿಕರ ಕ್ವಾರಂಟೈನ್ ಗೆ ಜಿಲ್ಲಾಡಳಿತ ಈಗಾಗಲೇ ಸಿದ್ದತೆ ಮಾಡಿಕೊಂಡಿದೆ.

    ದುಬೈನಿಂದ ಆಗಮಿಸುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ಬಳಿಕ ಆಸ್ಪತ್ರೆಗೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರಂಟೈನ್‌ ಕೇಂದ್ರಗಳಿಗೆ ಜಿಲ್ಲಾಡಳಿತವೇ ವಾಹನದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ.

    ಈ ಹಿನ್ನಲೆ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರು ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ಬರಲು ಅವಕಾಶ ಇಲ್ಲ. ಅಲ್ಲದೇ, ಸಾರ್ವಜನಿಕರಿಗೂ ಕ್ವಾರಂಟೈನ್‌ ಕೇಂದ್ರಗಳಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply