LATEST NEWS
ಹಿಜಬ್ ವಿವಾದ – ಕೇರಳದ ಸ್ಟೂಡೆಂಟ್ ಪೊಲೀಸ್ ಕೆಡೆಟ್‌ನಲ್ಲಿ ಹಿಜಬ್ ಧರಿಸಲು ಅವಕಾಶ ಇಲ್ಲ ಎಂದ ಸರಕಾರ
ಕೇರಳ: ಉಡುಪಿಯಲ್ಲಿ ಹಿಜಬ್ ಇಲ್ಲದೆ ತರಗತಿಯಲ್ಲಿ ಪಾಠ ಕೇಳುವುದಿಲ್ಲ ಎಂದು ಹಠ ಹಿಡಿದ ವಿಧ್ಯಾರ್ಥಿನಿಯರ ವಿವಾದಗಳ ನಡುವೆ ಕೇರಳ ಸರಕಾರ ತನ್ನ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆಯಲ್ಲಿ ಹಿಜಬ್ ಮತ್ತು ಪೂರ್ಣ ತೋಳಿನ ಉಡುಪನ್ನು ಧರಿಸಲು ಅವಕಾಶ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.
ಕೇರಳದ 8ನೇ ತರಗತಿ ಓದುತ್ತಿರುವ ಮುಸ್ಲಿಮ್ ವಿದ್ಯಾರ್ಥಿನಿಯೊಬ್ಬಳು ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆಯಲ್ಲಿರುವ ಸಮವಸ್ತ್ರದಲ್ಲಿ ಹಿಜಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಳು. ಇಸ್ಲಾಮಿಕ್ ನಂಬಿಕೆಗಳ ಪ್ರಕಾರ ತಲೆ ಸ್ಕಾರ್ಫ್ ಮತ್ತು ಫುಲ್ ಸ್ಲೀವ್ ಡ್ರೆಸ್ ಧರಿಸಲು ಅನುಮತಿ ಇಲ್ಲ ಎಂದು ಎಸ್‌ಪಿಸಿ ಅಧ್ಯಾಪಕರು ತಿಳಿಸಿದ್ದರಿಂದ ವಿದ್ಯಾರ್ಥಿಯು ನ್ಯಾಯಾಲಯದ ಮೊರೆ ಹೋಗಿದ್ದಳು. ಈ ಅರ್ಜಿಯನ್ನು ವಜಾಗೊಳಿಸಿದ್ದ ಕೋರ್ಟ್ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು.
ಎಸ್‌ಪಿಸಿ ಯೋಜನೆಯಲ್ಲಿ ಹಿಜಬ್ ಮತ್ತು ಪೂರ್ಣ ತೋಳಿನ ಉಡುಪನ್ನು ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಮ್ ವಿದ್ಯಾರ್ಥಿನಿಯೊಬ್ಬಳು ಕೇರಳ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಳು. ಈ ಮನವಿಯನ್ನು ಮಾನ್ಯ ಮಾಡಿದರೆ ಎಸ್‌ಪಿಸಿಯ ಜಾತ್ಯಾತೀತ ನಿಲುವಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ. ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆಯ ಸಮವಸ್ತ್ರದಲ್ಲಿ ಪ್ರತ್ಯೇಕತೆ ತರುವುದು ಸರಿಯಲ್ಲ. ಈ ಸಮವಸ್ತ್ರವನ್ನು ಧರಿಸಲು ಇಷ್ಟವಿಲ್ಲದವರು ಎಸ್‌ಪಿಸಿಯನ್ನು ಸೇರಬಾರದು ಎಂದು ತನ್ನ ಆದೇಶದಲ್ಲಿ ತಿಳಿಸಿದೆ.