LATEST NEWS
KSRTC ಮುಷ್ಕರಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವ್ಯಕ್ತವಾಗದ ಬೆಂಬಲ

KSRTC ಮುಷ್ಕರಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವ್ಯಕ್ತವಾಗದ ಬೆಂಬಲ
ಮಂಗಳೂರು ಫೆ.20: ತಮ್ಮನ್ನು ಸರ್ಕಾರಿ ನೌಕರರನ್ನಾಗಿಸಿ ಪರಿಗಣಿಸಲು ಮತ್ತು ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕರೆ ನೀಡಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಂದಿನಂತೆ KSRTC ಬಸ್ ಗಳ ಸಂಚಾರ ಆರಂಭವಾಗಿದೆ. KSRTC ಸಿಬ್ಬಂದಿಗಳು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಶಾಲಾ ಕಾಲೇಜು, ಕೆಲಸಕ್ಕೆ ತೆರಳಬೇಕಾದವರಿಗೆ ಯಾವುದೇ ತೊಂದರೆ ಇಲ್ಲ. ಹಲವು ಜಿಲ್ಲೆಗಳಿಂದ ಮಂಗಳೂರಿಗೆ ಬೆಳಗ್ಗೆ ಬಸ್ಗಳು ಆಗಮಿಸಿದ್ದವು.
