LATEST NEWS
ಮಗುವಿಗೆ ಚಿಕಿತ್ಸೆ ಕೊಡಿಸಲು ರಜೆ ಇಲ್ಲ, ಮಗ ಉಳಿಯಲಿಲ್ಲ, ಈ ಪರಿಸ್ಥಿತಿ ಯಾರಿಗೂ ಬರಬಾರದು ಎಂದ ಕಾನ್ಸಸ್ಟೇಬಲ್

ವಿಜಯಪುರ, ಮಾರ್ಚ್ 04: ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಎ.ಎಸ್. ಬಂಡುಗೋಳ ಅವರ ನವಜಾತ ಶಿಶು ಅನಾರೋಗ್ಯದಿಂದ ಮೃತಪಟ್ಟಿದೆ. ಮಗು ಆಸ್ಪತ್ರೆಗೆ ದಾಖಲಾಗಿದ್ದಾಗ ಅಧಿಕಾರಿಗಳು ರಜೆ ನೀಡಿಲ್ಲ ಎಂದು ಕಾನ್‌ಸ್ಟೆಬಲ್ ಎ.ಎಸ್. ಬಂಡುಗೋಳ ಆರೋಪ ಮಾಡಿದ್ದಾರೆ.

“ನನ್ನ ಮಗನಿಗೆ ಚಿಕಿತ್ಸೆ ಕೊಡಿಸಲು ರಜೆ ಸಿಗಲಿಲ್ಲ, ಕಡೆಗೂ ನನ್ನ ಮಗ ಉಳಿಯಲಿಲ್ಲ. ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು. ನನಗೆ ಬಹಳ ನೋವಾಗಿದೆ” ಈ ರೀತಿಯಾಗಿ ವಿಜಯಪುರ ಜಿಲ್ಲಾ ಪೊಲೀಸ್ ಸಿಬ್ಬಂದಿಗಳ ವಾಟ್ಸಪ್ ಗ್ರೂಪ್ನಲ್ಲಿ ಗಾಂಧಿ ಚೌಕ್ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಎ. ಎಸ್ ಬಂಡುಗೊಳ ಸಂದೇಶ ಕಳುಹಿಸಿದ್ದಾರೆ.

ಕಾನ್ಸಸ್ಟೇಬಲ್ ಎಎಸ್ ಬಂಡುಗೋಳ ಅವರ ನವಜಾತ ಶಿಶು ಅನಾರೋಗ್ಯದ ಕಾರಣ ಐಸಿಯುನಲ್ಲಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಮಗು ಮೃತಪಟ್ಟ ಬಳಿಕ ಎಎಸ್ ಬಂಡುಗೊಳ ಅವರು ಐಸಿಯುನಲ್ಲಿನ ಮಗುವಿನ ಫೋಟೋ ತೆಗೆದು ಪೊಲೀಸ್ ಸಿಬ್ಬಂದಿಗಳ ಗ್ರೂಪ್ನಲ್ಲಿ ಈ ರೀತಿಯಾಗಿ ಬರೆದು ಹಾಕಿದ್ದಾರೆ.
ಈ ಘಟನೆಯನ್ನು ಜೊಹೇದ್ ಕಿಂಗ್ ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಸ್ಟ್ ಮಾಡಿ, ಡಿಜಿಪಿ, ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ಮಾಧ್ಯಮಕ್ಕೆ ಟ್ಯಾಗ್ ಮಾಡಲಾಗಿದೆ.