Connect with us

LATEST NEWS

ಗುರವಾರದಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಇಲ್ಲ – ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು ಜುಲೈ 21:ಕರಾವಳಿಯಲ್ಲಿ ಕೊರೊನಾ ಮುಂಜಾಗೃತಾ ಕ್ರಮವಾಗಿ ಹೇರಿರುವ ಲಾಕ್ ಡೌನ್ ನಾಳೆ ಕೊನೆಗೊಳ್ಳಲಿದ್ದು, ಗುರುವಾರದಿಂದ ಜಿಲ್ಲೆಯಲ್ಲಿ ಯಾವುದೇ ಲಾಕ್ ಡೌನ್ ಇಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.


ಇಂದು ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯವನ್ನುದ್ದೇಶಿಸಿ ಮಾತನಾಡಿದ, ಇನ್ನು ಮುಂದೆ ರಾಜ್ಯದಲ್ಲಿ ಎಲ್ಲೂ ಲಾಕ್ ಡೌನ್ ಮಾಡುವುದಿಲ್ಲ ಎಂದು ಖಡಾಖಂಡಿತವಾಗಿ ತಿಳಿಸಿದ್ದು, ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಗುರುವಾರದಿಂದ ಯಾವುದೇ ಲಾಕ್ ಡೌನ್ ಇಲ್ಲ ಎಂದು ಕೋಟ ತಿಳಿಸಿದ್ದಾರೆ. ಈಗ ಇರುವ ಒಂದು ವಾರದ ಲಾಕ್ ಡೌನ್ ಗುರುವಾರ ಬೆಳಗ್ಗೆ5 ಗಂಟೆ ತನಕ ಮಾತ್ರ ಇರಲಿದ್ದು, ಗುರುವಾರದಿಂದ ದ.ಕ‌ ಜಿಲ್ಲೆ ಸಂಪೂರ್ಣ ಓಪನ್ ಆಗಲಿದೆ. ಈ ಹಿಂದೆ ಅವಕಾಶ ನೀಡಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಚಟುವಟಿಕೆ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Facebook Comments

comments