Connect with us

    LATEST NEWS

    ತಬ್ಲಿಘಿ ಜಮಾತ್‌ ಸಮಾವೇಶದಲ್ಲಿ ಭಾಗವಹಿಸಿದವರ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ – ಖಾದರ್

    ತಬ್ಲಿಘಿ ಜಮಾತ್‌ ಸಮಾವೇಶದಲ್ಲಿ ಭಾಗವಹಿಸಿದವರ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ – ಖಾದರ್

    ಮಂಗಳೂರು ಎಪ್ರಿಲ್ 6: ದೆಹಲಿಯ ನಿಜಾಮುದ್ದಿನ್ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ ದಕ್ಷಿಣಕನ್ನಡ ಜಿಲ್ಲೆಯ 29 ಮಂದಿಯನ್ನು ತಪಾಸಣೆ ಮಾಡಲಾಗಿದ್ದು, ಇದರಲ್ಲಿ ಇದರಲ್ಲಿ ಇಬ್ಬರ ಕೊರೊನಾ ಪಾಸಿಟಿವ್ ಹೊರತು ಪಡಿಸಿದರೆ ಉಳಿದವರ ಮೊದಲ ಸುತ್ತಿನ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಶಾಸಕ ಯು.ಟಿ ಖಾದರ್ ತಿಳಿಸಿದ್ದಾರೆ.

    ಮಂಗಳೂರಿನಲ್ಲಿ ಮಾತನಾಡಿದ ಅವರು ದೆಹಲಿಯ ತಬ್ಲೀಗ್‌ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡು ಜಿಲ್ಲೆಗೆ ಆಗಮಿಸಿದ್ದಾರೆ ಎನ್ನುವ ವಿಚಾರದಲ್ಲಿ ಯಾರೂ ಕೂಡಾ ಆತಂಕಗೊಳ್ಳಬೇಕಾದ ಅಗತ್ಯವಿಲ್ಲ. ಈಗಾಗಲೇ ಎಲ್ಲರನ್ನೂ ಪತ್ತೆ ಹಚ್ಚಲಾಗಿದ್ದು, ಅವರ ಕ್ವಾರಂಟೈನ್‌ಗೆ ಸಹಕಾರ ನೀಡಿದ್ದಾರೆ ಎಂದರು.ದೆಹಲಿ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಒಬ್ಬನಲ್ಲಿ ಮಾತ್ರ ಕರೋನಾ ಪಾಸಿಟಿವ್‌ ಪತ್ತೆಯಾಗಿದೆ. ಇನ್ನುಳಿದವರು ಅಲ್ಲಿಗೆ ಹೋದ ಸಂದರ್ಭದಲ್ಲಿ ಅವರಲ್ಲಿ ಸೋಂಕು ತಗಲಿರುವ ಸಾಧ್ಯತೆ ಇದೆ.

    ಸಮಾವೇಶದಲ್ಲಿ ಪಾಲ್ಗೊಂಡ ಒಟ್ಟು 29 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಇದರಲ್ಲಿ ಎರಡು ಜನರ ಪಾಸಿಟಿವ್ ಹೊರತುಪಡಿಸಿ ಉಳಿದವರೆಲ್ಲರೂ ಮೊದಲ ಸುತ್ತು ನೆಗೆಟಿವ್ ಬಂದಿದ್ದಾರೆ. ಇಲ್ಲಿ ಪಾಸಿಟಿವ್ ಬಂದ ಇಬ್ಬರಲ್ಲಿ ಒಬ್ಬರು ಮಾತ್ರ ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದು ಖಾದರ್‌ ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply