Connect with us

    LATEST NEWS

    ರಾಜ್ಯಾದ್ಯಂತ ನೈಟ್ ಕರ್ಪ್ಯೂ ಆದೇಶ ವಾಪಾಸ್

    ಬೆಂಗಳೂರು ನವೆಂಬರ್ 05: ಕೊರೊನಾ ಎರಡನೇ ಅಲೆಯಿಂದಾಗಿ ಹೇರಲಾಗಿದ್ದ ರಾತ್ರಿ ಕರ್ಪ್ಯೂ ವನ್ನು ರಾಜ್ಯ ಸರಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಣನಾರ್ಹ ರೀತಿಯಲ್ಲಿ ಇಳಿಕೆ ಕಂಡುಬರುವುದರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

     

    ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಏಪ್ರಿಲ್-ಅಂತ್ಯದಿಂದ ಎರಡನೇ ಅಲೆ ಪ್ರಾರಂಭದ ನಂತರ ಎರಡು ತಿಂಗಳು ಲಾಕ್ ಡೌನ್ ಅಂತ್ಯದ ವೇಳೆ ಜುಲೈ 3 ರಿಂದ ನೈಟ್ ಕರ್ಪ್ಯೂ ಆದೇಶವನ್ನು ಜಾರಿಗೊಳಿಸಲಾಗಿತ್ತು. ಇದೀಗ ನೈಟ್ ಕರ್ಪ್ಯೂ ಹಿಂಪಡೆದ ಕಾರಣ ವ್ಯಾಪಾರ ವಹಿವಾಟಿನಲ್ಲಿ ಚೆತರಿಕೆ ಕಂಡು ಬರಲಿದೆ ಎಂದು ಹೇಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply