Connect with us

    LATEST NEWS

    ಸೋಮವಾರದಿಂದ ನೈಟ್ ಕರ್ಫ್ಯೂ ಇಲ್ಲ….ಸೆಕ್ಷನ್ 144 ಮುಂದುವರಿಕೆ…!!

    ಮಂಗಳೂರು ಅಗಸ್ಟ್ 07: ಸರಣಿ ಹತ್ಯೆಗಳ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂವನ್ನು ಸೋಮವಾರದಿಂದ (ಅಗಸ್ಟ್ 8) ತೆಗೆದುಹಾಕಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ.


    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆದ ಸರಣಿ ಹತ್ಯೆಗಳ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯ ಮನವಿ ಮೇರೆಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ ವಿ ಅವರು  ರಾತ್ರಿ ಕರ್ಫ್ಯೂವನ್ನು ವಿಧಿಸಿದ್ದರು, ಮೊದಲು ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಇದ್ದ ನಿರ್ಬಂಧವನ್ನು ಬಳಿಕ ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ವಿಧಿಸಲಾಗಿತ್ತು.  ಆದರೆ ಇದೀಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿರುವ ಕಾರಣ ಸೋಮವಾರದಿಂದ ಎಲ್ಲಾ ರೀತಿಯ ನಿರ್ಬಂಧಗಳನ್ನು ತೆಗೆದು ಹಾಕಲಾಗಿದ್ದು, ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯ ನಿರ್ವಹಿಸಬಹುದಾಗಿದೆ. ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ. ಆದರೆ ಅನಗತ್ಯ ಸಂಚಾರ ಮಾಡದಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇನ್ನು ಸೆಕ್ಷನ್ 144 ಅನ್ವಯ ಜಾರಿಯಲ್ಲಿರುವ ನಿರ್ಬಂಧಗಳನ್ನು ಅಗಸ್ಟ್ 14 ರವರೆಗೆ ಮುಂದುವರೆಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply