Connect with us

    KARNATAKA

    ಜನವರಿ 31 ರಿಂದ ನೈಟ್ ಕರ್ಪ್ಯೂ ರದ್ದು….!!

    ಬೆಂಗಳೂರು ಜನವರಿ 29: ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರ ಮತ್ತು ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ನ್ನು ತೆಗೆದು ಹಾಕಿದೆ.


    ಈ ಕುರಿತಂತೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್ ಅಶೋಕ್ ನೈಟ್ ಕರ್ಫ್ಯೂ ಜನವರಿ 31 ರಿಂದ ಇರಲ್ಲ. ಪಬ್ ಆ್ಯಂಡ್ ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೆ. 100 ರಷ್ಟು ಅವಕಾಶ ನೀಡಲಾಗಿದೆ. ಆದರೆ ಸಿನಿಮಾ ಥಿಯೇಟರ್​ಗಳಿಗೆ ಶೇ. 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಅಂತ ತಿಳಿಸಿದರು.


    ಮದುವೆಗಳಿಗೆ ಒಳಾಂಗಣದಲ್ಲಿ 200 ಜನರಿಗೆ, ಹೊರಾಂಗಣದಲ್ಲಿ 300 ಜನರಿಗೆ ಅವಕಾಶ ನೀಡಲಾಗಿದೆ. ಮಂದಿರ, ಮಸೀದಿ, ಚರ್ಚ್​ಗಳಲ್ಲಿ ಸೇವೆ ಪುನಾರಂಭ ಮಾಡಬಹುದು. ಆದರೆ ಧಾರ್ಮಿಕ ಸ್ಥಳಗಳಲ್ಲಿ 50 ಜನ ಮಾತ್ರ ಒಂದೇ ಬಾರಿ ದರ್ಶನ ಪಡೆಯಬಹುದು. ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ಹೇರಲಾಗಿದೆ. ಜಿಮ್, ಈಜುಕೊಳದಲ್ಲಿ ಶೇ. 50 ರಷ್ಟು ಅವಕಾಶ ನೀಡಲಾಗಿದೆ ಅಂತ ಆರ್ ಅಶೋಕ್ ಹೇಳಿದರು.

    ಪ್ರವಾಸಿತಾಣಗಳ ಭೇಟಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ ಅಂತ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್​​ ಹೇಳಿದ್ದಾರೆ. ಕೊವಿಡ್​ ನಿಯಮ ಪಾಲಿಸಿ ಪ್ರವಾಸಿಗರು ಭೇಟಿ ನೀಡಬಹುದು. ರಾಜ್ಯದ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಿರಲಿವೆ. ಸಫಾರಿ ಸೇರಿದಂತೆ ಎಲ್ಲಾ ಚಟುವಟಿಕೆಗೆ ಅವಕಾಶ ಇರುತ್ತದೆ ಅಂತ ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply