ಕುಕ್ಕೆ ಸುಬ್ರಹ್ಮಣ್ಯದ ನರಸಿಂಹ ಮಠದಲ್ಲಿ ನಡೆಯುವ ಎಲ್ಲಾ ಸೇವೆಗಳು ಒಂದು ವಾರಗಳ ಕಾಲ ರದ್ದು

ಮಂಗಳೂರು ಮಾ.16: ಕೊರೊನಾ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯದ ನರಸಿಂಹ ಮಠದಲ್ಲಿ ನಡೆಯುವ ಎಲ್ಲಾ ಸೇವೆಗಳನ್ನು ರದ್ದುಪಡಿಸಲು ತೀರ್ಮಾನಿಸಲಾಗಿದೆ.

ಮಾರ್ಚ್ 18 ರಿಂದ ಒಂದು ವಾರಗಳ ಕಾಲ ಮಠದಲ್ಲಿ ಸರ್ಪ ಸಂಸ್ಕಾರ ಸೇವೆಯಾದಿಯಾಗಿ ಯಾವುದೇ ಸೇವೆಗಳನ್ನು ನಡೆಸಲಾಗುವುದಿಲ್ಲ ಎಂದು ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಹೆಚ್ಚು ಜನ ಸೇರುವ ಸ್ಥಳಗಳು ರೋಗ ಹರಡಲು ಕಾರಣವಾಗಬಹುದು ಎನ್ನುವ ಸೂಚನೆಯನ್ನು ಸರಕಾರಗಳು ನೀಡುತ್ತಿರುವ ಹಿನ್ನಲೆಯಲ್ಲಿ ಮಠದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಬೆಳವಣಿಗೆಯನ್ನು ನೋಡಿಕೊಂಡು ಸೇವೆಯನ್ನು ಮತ್ತೆ ಆರಂಭಿಸಲಾಗುವುದು ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.