Connect with us

    KARNATAKA

    ಕೊರೊನಾ ಹಿನ್ನಲೆ ಸಾರ್ವಜನಿಕ ಸ್ಥಳದಲ್ಲಿ ಗಣೇಶೋತ್ಸವಕ್ಕೆ ರಾಜ್ಯ ಸರಕಾರದಿಂದ ನಿರ್ಬಂಧ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ಸಾರ್ವಜನಿಕವಾಗಿ ಗಣೇಶೋತ್ಸವಕ್ಕೆ ರಾಜ್ಯ ಸರಕಾರ ನಿರ್ಬಂಧ ಹೇರಿದ್ದು, ಮೊಹರಂ ಮತ್ತಿತರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಯಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಇಂದು ಪ್ರಕಟಿಸಿದೆ.


    ಮೊಹರಂ, ಶ್ರೀ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದುರ್ಗಾ ಪೂಜೆ ಮೊದಲಾದ ಹಬ್ಬ ಆಚರಣೆ ಸಂದರ್ಭದಲ್ಲಿ ಜನದಟ್ಟಣೆ ಮತ್ತು ಒಗ್ಗೂಡುವಿಕೆಗಳನ್ನು ತಡೆಗಟ್ಟಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಸಲಹೆ ನೀಡಲಾಗಿದೆ. ಸಾಮಾಜಿಕ, ರಾಜಕೀಯ, ಕ್ರೀಡಾ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬೃಹತ್ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ.


    ಮೊಹರಂ ಆಚರಣೆ ಸಂದರ್ಭ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಮೊಹರಂ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್‌ ಅನ್ನು ಕಡ್ಡಾಯವಾಗಿ ಧರಿಸಬೇಕು. 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕೆಳಗಿನವರು ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು.
    ಮಸೀದಿಯಲ್ಲಿಯೇ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು. ಆ ಸಂದರ್ಭದಲ್ಲಿ ದೈಹಿಕ ಅಂತರ, ಮಾಸ್ಕ್‌ ಧರಿಸುವಿಕೆ ಕಡ್ಡಾಯವಾಗಿದೆ.

    ಇನ್ನು ಗಣೇಶ ಚತುರ್ಥಿ ಹಬ್ಬ ಸಂದರ್ಭ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನ ಅಥವಾ ಮನೆಗಳಲ್ಲಿಯೇ ಆಚರಿಸತಕ್ಕದ್ದು. ಬೇರೆ ಯಾವುದೇ ಸಾರ್ವಜನಿಕ ಸ್ಥಳ, ಹೊರಾಂಗಣಗಳಲ್ಲಿ ಗೌರಿ- ಗಣೇಶ ಮೂರ್ತಿಯನ್ನು ಪ್ರತಿಸ್ಠಾಪನೆ ಮಾಡುವಂತಿಲ್ಲ.
    ಗಣೇಶ ಮೂರ್ತಿಗಳನ್ನು ತರುವಾಗ ಅಥವಾ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ದೇವಸ್ಥಾನಕ್ಕೆ ತೆರಳುವ ಭಕ್ತರು ಮಾಸ್ಕ್‌ ತರಿಸುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ

    Share Information
    Advertisement
    Click to comment

    Leave a Reply

    Your email address will not be published. Required fields are marked *