ಮಂಗಳೂರು ಅಗಸ್ಟ್ 13: ಕರಾವಳಿಯಲ್ಲಿ ಮಳೆ ಅಬ್ಬರ ಕಡಿಮೆಯಾಗಿತ್ತು. ಇದೀಗ ಬಿಸಿಲು ಜೊತೆ ಸೆಖೆ ಪ್ರಾರಂಭವಾಗಿದೆ.

ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಬಿಸಿಲಿನ ವಾತಾವರಣವಿದ್ದು ಅಪರೂಪಕ್ಕೆ ಮಳೆಯಾಗುತ್ತಿದೆ. ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ ಸೆಖೆ ಅನುಭವವಾಗುತ್ತಿದೆ.
ಉಡುಪಿ ಜಿಲ್ಲೆಯಲ್ಲೂ ಮಳೆ ಇಳಿಕೆಯಾಗಿದ್ದು. ಕೆಲವೆಡೆ ಸಾಧಾರಣ ಮಳೆಯಾಗಿದೆ. ಬಹುತೇಕ ಕಡೆಗಳಲ್ಲಿ ಬಿಸಿಲು ಮೋಡ ಕವಿದ ವಾತಾವರಣದ ನಡುವೆ ಬಿಟ್ಟುಬಿಟ್ಟು ಮಳೆ ಸುರಿದಿದೆ.