LATEST NEWS
ಕರಾವಳಿಯಲ್ಲಿ ಕೊಂಚ ಬಿಡುವು ನೀಡಿದ ಮಳೆರಾಯ

ಮಂಗಳೂರು ಸೆಪ್ಟೆಂಬರ್ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿದ್ದ ಮಳೆ ಇಂದು ಕೊಂಚ ಬಿಡುವು ನೀಡಿದೆ. ಇಂದು ಮುಂಜಾನೆಯಿಂದ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಮಂಗಳೂರು ನಗರದಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು ಬೆಳಿಗ್ಗೆಯಿಂದ ಮಳೆಯಾದ ಬಗ್ಗೆ ವರದಿಯಾಗಿಲ್ಲ. ಈ ನಡುವೆ ಹವಮಾನ ಇಲಾಖೆ ಸೆ.17 ರವರೆಗೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಭಾನುವಾರವೂ ಮೋಡ ಕವಿದ ವಾತಾವರಣವಿತ್ತು. ಆಗಾಗ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ನಗರದಲ್ಲಿ ಉಷ್ಣಾಂಶ ಕುಸಿತವಾಗಿದೆ. ಮುಂದಿನ 24 ಗಂಟೆಗಳ ಕಾಲ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕೊಡಗು ಜಿಲ್ಲೆಯಲ್ಲಿ ಶುಕ್ರವಾರದಿಂದ ಉತ್ತಮ ಮಳೆ ಸುರಿಯುತ್ತಿದೆ. ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ನಾಪೋಕ್ಲು, ಚೇರಂಬಾಣೆ ಭಾಗದಲ್ಲಿ ಹಳ್ಳಗಳು ತುಂಬಿ ಹರಿಯುತ್ತಿವೆ. ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದಿಂದ ಕಾವೇರಿ ನದಿಯಲ್ಲಿನ ಒಳಹರಿವು ಹೆಚ್ಚಾಗಿದೆ