BELTHANGADI
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆ ಇಲ್ಲ, ಹೈಕೋರ್ಟಿನಿಂದ ಅರ್ಜಿ ವಜಾ..!
ಬೆಂಗಳೂರು: ದೇಶದಲ್ಲೇ ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಸೌಜನ್ಯ ಪ್ರಕರಣದ ಹೈಕೋರ್ಟ್ ತೀರ್ಪು ಹೊರಬಿದ್ದಿದ್ದು ಈ ಪ್ರಕೃಣದ ಮರು ತನಿಖೆ ಇಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ್ದು ಈ ಕುರಿತ ಅರ್ಜಿಗಳನ್ನು ವಜಾಗೊಳಿಸಿದೆ.
ಸೌಜನ್ಯ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ. ಈ ಹಿಂದೆ ನಡೆದ ತನಿಖೆಗಳಲ್ಲಿ ಸೌಜನ್ಯಗಳಿಗೆ ಸರ್ಕಾರದ ಅಂಗ ಸಂಸ್ಥೆಗಳೇ ಅನ್ಯಾಯ ಮಾಡಿದ್ದವು. ಹೀಗಾಗಿ ಸೌಜನ್ಯ ಮರುತನಿಗೆ ಮಾಡಬೇಕು ಎನ್ನುವ ಹಕ್ಕೋತ್ತಾಯ ಜನರಿಂದ ಮೂಡಿಬಂದಿತ್ತು. ಈ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ತೀರ್ಪು ನೀಡಿದೆ.
ಅದೇ ರೀತಿ ಪ್ರಕರಣದಲ್ಲಿ ನಿರಪರಾಧಿಯೆಂದು ಹೊರ ಬಂದ ಸಂತೋಷ್ ರಾವ್ ತನಗೆ ಪರಿಹಾರ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಸೌಜನ್ಯ ಪ್ರಕರಣವನ್ನು ಮರುತನಿಖೆ ಮಾಡಲು ಆಗುವುದಿಲ್ಲ ಎಂದು ಹೇಳಿದೆ ಹೈಕೋರ್ಟ್. ಈ ಮೂಲಕ ಸೌಜನ್ಯಾ ಪೋಷಕರು ಸಲ್ಲಿಸಿದ ಅರ್ಜಿ ವಜಾ ಆಗಿದೆ. ಧರ್ಮಸ್ಥಳದ ಸೌಜನ್ಯ ಪ್ರಕರಣವನ್ನು ಪೊಲೀಸರುಗಳು ವೈದ್ಯರುಗಳು ರಾಜಕಾರಣಿಗಳು ಮತ್ತು ಇಡೀ ವ್ಯವಸ್ಥೆ ತನಿಖೆ ಆಗದಂತೆ ನೋಡಿಕೊಂಡಿತ್ತು.
ಎಲ್ಲರೂ ಸೇರಿಕೊಂಡು ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ ಎಂದು ಆರೋಪಿಸಿ ಕಳೆದ 12 ವರ್ಷಗಳಿಂದಲೂ ತಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸಲು ಸೌಜನ್ಯಾಳ ತಾಯಿ ಕುಸುಮಾವತಿ ಹೋರಾಟ ಮಾಡುತ್ತಿದ್ದಾರೆ. ಸೌಜನ್ಯ ಪ್ರಕರಣದ ಪ್ರಾರಂಭದಿಂದಲೂ ಮಹೇಶ್ ಶೆಟ್ಟಿ ತಿಮರೋಡಿ, ಸಂತಸ್ಥ ಕುಟುಂಬದ ಬೆನ್ನಿಗೆ ನಿಂತಿದ್ದಾರೆ. ಕಾಲದಿಂದ ಕಾಲಕ್ಕೆ ಹೊಸ ಹೊಸ ಹೋರಾಟಗಾರರು ಸೌಜನ್ಯ ಪರ ಹೋರಾಟದ ಉದ್ದೇಶಕ್ಕೆ ಬಲ ತುಂಬಿದ್ದು, ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ ಈ ಪೈಕಿ ಪ್ರಮುಖ ಹೆಸರು. ಇವರೆಲ್ಲರ ಪ್ರಯತ್ನದ ಫಲವಾಗಿ ಸೌಜನ್ಯ ಪ್ರಕರಣ ಮರು ತನಿಖೆಗೆ ಹೋಗಬೇಕು ಎಂದು ಕೋರ್ಟ್ ಮೆಟ್ಟಲು ಹತ್ತಿದ್ದರು. ಆದರೆ ಕೋರ್ಟ್ ಇದೀಗ ಸೌಜನ್ಯ ಹೋರಾಟಗಾರರಿಗೆ ತುಸು ನಿರಾಸೆ ಮೂಡಿಸಿದೆ.