ನೋ ರಿಯಾಕ್ಷನ್ ಟು ಮಿಸ್ಟರ್ ಜನಾರ್ಧನ್ ಪೂಜಾರಿ – ಮಾಜಿ ಸಿಎಂ ಸಿದ್ದರಾಮಯ್ಯ

ಮಂಗಳೂರು ನವೆಂಬರ್ 5: ಕಾಂಗ್ರೇಸ್ ನ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಅವರು ಕಾಂಗ್ರೇಸ್ ನ ಶನಿ ಸಿದ್ದರಾಮಯ್ಯ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಮಾಜಿ ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

ನಾಳೆ ನಡೆಯುವ ಕಾಂಗ್ರೇಸ್ ಸಮಾವೇಶದಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಸಿದ್ದರಾಮಯ್ಯ ಕಾಂಗ್ರೇಸ್ ಗೆ ಶನಿ ಇದ್ದ ಹಾಗೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ಕೇಳಿದ ಪತ್ರಕರ್ತರಿಗೆ ಸಿದ್ದರಾಮಯ್ಯ ನೋ ರಿಯಾಕ್ಷನ್ ಟು ಮಿಸ್ಟರ್ ಜನಾರ್ಧನ್ ಪೂಜಾರಿ ಎಂದಷ್ಟೇ ಹೇಳಿದರು.

ದೇವೇಗೌಡ ಯುಡಿಯೂರಪ್ಪ ಟೆಲಿಫೋನ್ ಮಾತುಕತೆ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ , ಗೊತ್ತಿಲ್ಲದೆ ನಾನು ಏನು ಮಾತಾಡ್ಲಪ್ಪಾ? ಎಂದು ಪತ್ರಕರ್ತರನ್ನೇ ಪ್ರಶ್ನೆ ಮಾಡಿದರು.

ಅನರ್ಹ ಶಾಸಕರ ಕುರಿತಾದ ಸಿಎಂ ಯಡಿಯೂರಪ್ಪ ಅವರ ಆಡಿಯೋ ಅವರದ್ದೇ ಎಂದು ಒಪ್ಪಿಕೊಂಡಿದ್ದಾರೆ. ಈ ಪ್ರಕರಣ ಈಗಾಗಲೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ನಮ್ಮ ಪರ ವಕೀಲರು ವಾದ ಮಂಡಿಸಿದ್ದಾರೆ. ಅಲ್ಲದೆ ಮೈತ್ರಿ ಸರಕಾರ ಪತನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕುಮ್ಮಕ್ಕು ಬಹಿರಂಗವಾಗಿದ್ದು, ಗೃಹ ಸಚಿವರೇ ಹೀಗೆ ಮಾಡಿದ್ರೆ ದೇಶದಲ್ಲಿ ಪ್ರಜಾಪ್ರಭುತ್ವ ಸಂವಿಧಾನ ಉಳಿಯುತ್ತಾ ಎಂದು ಪ್ರಶ್ನಿಸಿದರು.

Facebook Comments

comments