LATEST NEWS
ದಸರಾ; ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಅವಕಾಶ: ಶಾಸಕ ವೇದವ್ಯಾಸ ಕಾಮತ್
ದಸರಾ; ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಅವಕಾಶ: ಶಾಸಕ ವೇದವ್ಯಾಸ ಕಾಮತ್
ಮಂಗಳೂರು, ಅಕ್ಟೋಬರ್ 12: ದಸರಾ ಅಚರಣೆಯ ವೇಳೆ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ, ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಈ ಬಾರಿ ಅವಕಾಶ ನೀಡಲು ದ.ಕ ಜಿಲ್ಲಾಡಳಿತ ನಿರ್ಧರಿಸುವ ವಿಶ್ವಾಸವಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಕೊರೊನಾ ಕಾರಣದಿಂದ ದಸರಾ ಸಂದರ್ಭದಲ್ಲಿ ಹುಲಿ ವೇಷ ಕುಣಿತಕ್ಕೆ ದ.ಕ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ.
ಆದರೆ, ವಿವಿಧ ದೇವಸ್ಥಾನ ಹಾಗೂ ಶಾರದೋತ್ಸವ ಸಮಿತಿಯ ಪ್ರಮುಖರು ಅವಕಾಶ ನೀಡುವಂತೆ ತನಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು.
ಕರಾವಳಿಯ ಮಣ್ಣಿನ ಸಂಸ್ಕೃತಿ ಸಂಸ್ಕಾರ ಹಾಗೂ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಎದುರಾಗಬಾರದು ಎಂಬ ಕಾರಣದಿಂದ ನಾನು ಈಗಾಗಲೇ ಜಿಲ್ಲಾಧಿಕಾರಿಯವರಲ್ಲಿ ಈ ವಿಷಯ ಪ್ರಸ್ತಾವಿಸಿದ್ದೇನೆ
. ಸಂಪ್ರದಾಯ ಪ್ರಕಾರವಾಗಿ ಹುಲಿ ವೇಷ ಕುಣಿತಕ್ಕೆ ಅವಕಾಶ ನೀಡುವಂತೆ ಕೋರಲಾಗಿದೆ. ಜತೆಗೆ ಸರಕಾರದ ಉನ್ನತ ಅಧಿಕಾರಿಗಳ ಜತೆಗೂ ಚರ್ಚಿಸಿದ್ದೇನೆ.
ದೇವಸ್ಥಾನದ ಉತ್ಸವ ಹಾಗೂ ಶಾರದೋತ್ಸವ ಸಮಿತಿ ಕಾರ್ಯಕ್ರಮದ ವೇಳೆ ಕನಿಷ್ಠ ಸಂಖ್ಯೆಯಲ್ಲಿ ಹುಲಿ ವೇಷ ಕುಣಿತಕ್ಕೆ ಸಂಪ್ರದಾಯ ಪ್ರಕಾರ ಅವಕಾಶ ಕಲ್ಪಿಸುವಂತೆ ಕೋರಿದ್ದೇನೆ.
ಹೀಗಾಗಿ ಸಂಪ್ರದಾಯದಂತೆ ಹುಲಿವೇಷ ಕುಣಿತಕ್ಕೆ ಜಿಲ್ಲಾಡಳಿತ ಅವಕಾಶ ನೀಡಲಿದ್ದು, ಯಾರೂ ಕೂಡ ಆತಂಕ ಪಡುವ ಆವಶ್ಯಕತೆ ಇಲ್ಲ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Facebook Comments
You may like
-
ಉತ್ತಮ ಆಡಳಿತ ಕೊಡುವ ಮನೋಭಾವನೆ ಇದ್ದರೆ ಖಾತೆ ಕ್ಯಾತೆ ಬರುವುದಿಲ್ಲ – ಸಚಿವ ಅಂಗಾರ
-
ಎರಡು ಹುಲಿಗಳ ನಡುವೆ ಕಾಳಗದ ವಿಡಿಯೋ ವೈರಲ್
-
ಕೊರೊನಾ ಸುರಕ್ಷಾ ಕ್ರಮಗಳೊಂದಿಗೆ ಗ್ರಾಮಪಂಚಾಯತ್ ಚುನಾವಣೆ
-
ಕರ್ನಾಟಕದಲ್ಲಿ ಲವ್ ಜಿಹಾದ್ ಕಾನೂನು ಬಂದೇ ಬರುತ್ತೆ – ಗೃಹ ಸಚಿವ ಬಸವರಾಜ ಬೊಮ್ಮಾಯಿ
-
ರಾಜಕೀಯ ಒತ್ತಡ – ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆಗೆ ಯತ್ನ
-
ರಾಜ್ಯ ಬಂದ್ ಮಾಡಲು ಬಂದರೆ ಕಲ್ಲಲ್ಲಿ ಹೊಡೆದು ಓಡಿಸಿ – ಕಾಳಿ ಶ್ರೀ ರಿಷಿ ಕುಮಾರ ಸ್ವಾಮೀಜಿ
You must be logged in to post a comment Login