Connect with us

    LATEST NEWS

    ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲಗಳಿಲ್ಲ – ಸಂಸದ ನಳಿನ್ ಕುಮಾರ್ ಕಟೀಲ್

    ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲಗಳಿಲ್ಲ – ಸಂಸದ ನಳಿನ್ ಕುಮಾರ್ ಕಟೀಲ್

    ಮಂಗಳೂರು ಎಪ್ರಿಲ್ 19: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆ ಮಂಗಳೂರಿನಲ್ಲಿ ಇಂದು ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು. ಬಿಜೆಪಿಯ ಹಿರಿಯ ಮುಖಂಡ , ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಅವರು ಚುನಾವಣಾ ಕಾರ್ಯಲಯ ಉದ್ಗಾಟಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹಿಂದುತ್ವ, ಹಿಂದು ವಿಚಾರ ಧಾರೆ ಮತ್ತು ಸಂಘಟನೆಯ ಆಧಾರದಲ್ಲಿ ಈ ಬಾರಿಯ ಚುನಾವಣೆಯನ್ನು ಎದುರಿಸುತ್ತೇವೆ. ಕಾಂಗ್ರೆಸ್ ಪಕ್ಷದಂತೆ ನಾವು ಜಾತಿ ಹೆಸರಿನಲ್ಲಿ ಮತ ಕೇಳಲ್ಲ, ಅಭ್ಯರ್ಥಿ ಆಯ್ಕೆಯಲ್ಲಿ ಬಿಜೆಪಿ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಉಳಿದವರಂತೆ ವಾಟ್ಸಾಪ್ , ಫೆಸ್ ಬುಕ್ ನಲ್ಲಿರುವವರಿಗೇ ಮಾತ್ರ ಗೊಂದಲಗಳಿವೆ ಎಂದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದರು.

    ಮಾಜಿ ಶಾಸಕರಾದ ರುಕ್ಮಯ ಪೂಜಾರಿ ಮಾತನಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅಧಿಕಾರಿಗಳಿಗೆ ಸ್ವತಂತ್ರವಾಗಿ ಕೆಲಸ ಮಅಡಲು ಸಾಧ್ಯವಾಗುತ್ತಿಲ್ಲ. ದ್ವೇಷದ ರಾಜಕರಣ, ಜಾತಿ- ಧರ್ಮದ ಹೆಸರಿನಲ್ಲಿ ಜನರನ್ನು ವಿಭಜನೆ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಜನರ ನೆಮ್ಮದಿಯ ಬದುಕಿಗೆ ಬಿಜೆಪಿಯನ್ನು ಆಡಳಿತಕ್ಕೆ ತರುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply