LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸದ್ಯದ ಮಟ್ಟಿಗೆ ಸೀಲ್ ಡೌನ್ ಮಾಡುವ ಚಿಂತನೆ ಇಲ್ಲ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸದ್ಯದ ಮಟ್ಟಿಗೆ ಸೀಲ್ ಡೌನ್ ಮಾಡುವ ಚಿಂತನೆ ಇಲ್ಲ
ಮಂಗಳೂರು ಎ.12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸದ್ಯದ ಮಟ್ಟಿಗೆ ಸೀಲ್ ಡೌನ್ ಮಾಡುವ ಚಿಂತನೆ ಇಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಕೊರೊನಾ ಶಂಕಿತರನ್ನು ಇರಿಸಲು ಅನುಕೂಲ ಆಗುವ ದೃಷ್ಟಿಯಿಂದ ಇಲ್ಲಿನ ಕೇಂದ್ರ ರೈಲು ನಿಲ್ದಾಣದಲ್ಲಿ ರೈಲು ಬೋಗಿಗಳನ್ನು ಐಸೋಲೇಶನ್ ವಾರ್ಡ್ ಗಳನ್ನು ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೊರೊನಾ ವೈರಸ್ ವಿರುದ್ದದ ಹೋರಾಟಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಜಿಲ್ಲೆಯ ಮಟ್ಟಿಗೆ ಸೀಲ್ ಡೌನ್ ಮಾಡುವ ಯಾವುದೇ ಚಿಂತನೆ ಇಲ್ಲ ಎಂದು ಹೇಳಿದರು.
