Connect with us

    DAKSHINA KANNADA

    ನಾಳೆ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ಬೆಂಬಲ ಇಲ್ಲ

    ನಾಳೆ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ಬೆಂಬಲ ಇಲ್ಲ

    ಮಂಗಳೂರು ಜನವರಿ 24: ನಾಳೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಮಂಗಳೂರಿನಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ಈ ಕುರಿತಂತೆ ಮಂಗಳೂರಿನ ಅಂಗಡಿ ಮುಂಗಟ್ಟುಗಳಲ್ಲಿ ಭಿತ್ತಿ ಪತ್ರಗಳನ್ನು ಅಂಟಿಸಿದ್ದು ನಾಳೆಯ ಬಂದ್ ಗೆ ಬೆಂಬಲ ಇಲ್ಲ ಎಂದು ತಿಳಿಸಲಾಗಿದೆ.

    ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಮಂಗಳೂರು ಶಾಖೆಯ ಕಾರ್ಯಕರ್ತರು ನಾಳೆ ರೈಲು ತಡೆದು ಸಾಂಕೇತಿಕ  ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

    ನಾಳೆಯ ಬಂದ್ ಕರೆಗೆ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಯಾವೊಂದು ಸಂಘಟನೆ ಬೆಂಬಲ ಘೋಷಿಸದ ಕಾರಣ ನಾಳೆ ಕರಾವಳಿ ಜಿಲ್ಲೆಗಳಲ್ಲಿ ಯಾವುದೇ ಬಂದ್ ಇರುವುದಿಲ್ಲ. ಈ ಹಿನ್ನಲೆಯಲ್ಲಿ ನಾಳೆ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ ಜೀವನ ಸಾಮಾನ್ಯ ವಾಗಿ ಇರಲಿದೆ.

    ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ಪದೇ ಪದೇ ಮಹದಾಯಿ ಮತ್ತು ಮೇಕೆದಾಟು ವಿಚಾರವಾಗಿ ಪದೇ ಪದೇ ಬಂದ್ ಕರೆ ನೀಡುತ್ತಿರುವ ಹಿನ್ನಲೆಯಲ್ಲಿ ಕರಾವಳಿ ಜನ ಬೇಸತ್ತಿದ್ದಾರೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಎತ್ತಿನಹೊಳೆ ವಿರೋಧಿ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ ನೀಡದಿದ್ದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿಲ್ಲ.

    ಪದೇ ಪದೇ ಬಂದ್ ಮಾಡುವುದರಿಂದ ಪ್ರಮುಖವಾಗಿ ಮಧ್ಯಮವರ್ಗ ಹಾಗೂ ಬಡವರ ಹೊಟ್ಟೆಗೆ ಪೆಟ್ಟು ಬೀಳುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಂಗಡಿಗಳ ಹೊರಗೆ,ಹೋಟೆಲ್ ಗಳ ಮುಂದೆ , ಬಸ್ ಸ್ಟ್ಯಾಂಡ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಂದ್ ಗೆ ಬೆಂಬಲ ಇಲ್ಲ ಎಂಬ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *