LATEST NEWS
ಸಾಸ್ತಾನ ಟೋಲ್ ಗೇಟ್ ನಲ್ಲಿ ಟೋಲ್ ಫ್ರೀ ಸಂಚಾರ

ಸಾಸ್ತಾನ ಟೋಲ್ ಗೇಟ್ ನಲ್ಲಿ ಟೋಲ್ ಫ್ರೀ ಸಂಚಾರ
ಉಡುಪಿ ಜೂನ್ 1: ರಾಷ್ಟ್ರೀಯ ಹೆದ್ದಾರಿ 66 ಸಾಸ್ತಾನ ನವಯುಗ ಟೋಲ್ ನಲ್ಲಿ ಯಾವುದೇ ಟೋಲ್ ನೀಡದೇ ವಾಹನಗಳು ಸಂಚಾರ ನಡೆಸುತ್ತಿವೆ.
ರಾಷ್ಟ್ರೀಯ ಹೆದ್ದಾರಿ 66 ರ ಸಾಸ್ತಾನ ನವಯುಗ ಟೋಲ್ ನಲ್ಲಿ ನೌಕರರು ಮತ್ತು ಆಡಳಿತ ಮಂಡಳಿ ನಡುವಿನ ಮುಸುಕಿನ ಗುದ್ದಾಟದ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆಯಿಂದ ಯಾವುದೆ ಟೋಲ್ ನೀಡದೆ ವಾಹನಗಳು ಸಂಚಾರ ನಡೆಸುತ್ತಿವೆ.

ನವಯುಗ ಟೋಲ್ ಆಡಳಿತ ಮಂಡಳಿ ಮತ್ತು ನೌಕರರ ನಡುವೆ ಕೆಲವು ದಿನಗಳಿಂದ ಮುಸುಕಿನ ಗುದ್ದಾಟ ನಡೆಯುತ್ತಿತ್ತು. ಇಂದು ತಮ್ಮ ಬೇಡಿಕೆ ಈಡೇರಿಸುವಂತೆ ನೌಕರರು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಟೋಲ್ ಗೇಟ್ ನಲ್ಲಿ ಯಾವುದೇ ಟೋಲ್ ಸಂಗ್ರಹ ನಡೆಯುತ್ತಿಲ್ಲ.
ಆಡಳಿತ ಮಂಡಳಿ ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸುತ್ತಿರುವ ನೌಕರರು ಅಲ್ಲಿಯವರೆಗೆ ಟೋಲ್ ಸಂಗ್ರಹಿಸುವುದಿಲ್ಲ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.