Connect with us

  LATEST NEWS

  ಸೌಜನ್ಯ ಪರ ಹೋರಾಟ ಸಮಿತಿಯಿಂದ ನೋಟಾ ಅಭಿಯಾನ

  ಮಂಗಳೂರು, ಎಪ್ರಿಲ್ 5: ಸೌಜನ್ಯಪರ ಹೋರಾಟ ನಡೆಸುತ್ತಿರುವ ಸಮಿತಿ ಇದೀಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ ನೀಡಿದ್ದು, ಈ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ.

  ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸೌಜನ್ಯಪರ ಹೋರಾಟ ಸಮಿತಿಯ ಮುಖಂಡ ಗಿರೀಶ್ ಮಟ್ಟಣ್ಣನವರ್ ಕಳೆದ 11 ವರ್ಷಗಳಿಂದ ಸೌಜನ್ಯಗಳಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸಿದರು ಕೂಡ ಪ್ರಮುಖ ರಾಜಕೀಯ ಪಕ್ಷಗಳಿಂದ ಸ್ಪಂದನೆ ಸಿಗದ ಕಾರಣ ಈ ನೋಟಾ ಜಾಗೃತಿ ಅಭಿಯಾನ ಪ್ರಾರಂಭಿಸಲಾಗಿದೆ ಎಂದರು.

  ನೋಟ ಬಗ್ಗೆ ಜನ ಜಾಗೃತಿ ಅಗತ್ಯವಿದೆ ಎಂದು ನ್ಯಾಯಾಲಯವೇ ಹೇಳಿದೆ. ಚುನಾವಣಾ ಆಯೋಗವೂ ನಮ್ಮ ಈ ಅಭಿಯಾನಕ್ಕೆ ಸಹಕಾರ ನೀಡುವ ಜೊತೆ ಹೆಣ್ಣು ಮಕ್ಕಳ ಬಗ್ಗೆ ಪ್ರಾಧಾನ್ಯತೆ ನೀಡುವ ಈ ಅಭಿಯಾನಕ್ಕೆ ಜನರು ಸಹಕಾರ ನೀಡಬೇಕು ಎಂದರು.
  ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ ಮಾತ್ರವಲ್ಲ ಅದಕ್ಕಿಂತಲೂ ಹಿಂದೆ ನಡೆದ ಆನೆ ಮಾವುತ ಪ್ರಕರಣ, ಪದ್ಮಾವತಿ ಕೊಲೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ನಡೆದ ಎಲ್ಲಾ ಹೆಣ್ಣು ಮಕ್ಕಳ ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಿರುವುದಾಗಿ ಹೇಳಿದರು. ದ.ಕ. ಹಾಗೂ ಉಡುಪಿಯ ಕರಾವಳಿ ಭಾಗದಲ್ಲಿ ಈ ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ.24ರಂದು ನೋಟ ಜನಜಾಗೃತಿ ಸಭೆ ನಡೆಸುತ್ತಿ ರುವುದಾಗಿ ಪ್ರಸನ್ನ ರವಿ ತಿಳಿಸಿದರು.

  Share Information
  Advertisement
  Click to comment

  You must be logged in to post a comment Login

  Leave a Reply