Connect with us

    LATEST NEWS

    ಸ್ಯಾಕ್ಸೋಪೋನ್ ಮಾಂತ್ರಿಕ ಕದ್ರಿ ಗೋಪಾಲನಾಥ್ ನಿಧನ

    ಸ್ಯಾಕ್ಸೋಪೋನ್ ಮಾಂತ್ರಿಕ ಕದ್ರಿ ಗೋಪಾಲನಾಥ್ ನಿಧನ

    ಮಂಗಳೂರು ಅಕ್ಟೋಬರ್ 11: ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕದ್ರಿಗೋಪಾಲನಾಥ್ ರನ್ನು ಮಂಗಳೂರಿನ ಖಾಸಗಿ ಅಸ್ಪತ್ರೆಗ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

    ಪತ್ನಿ ಮತ್ತು ಪುತ್ರ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮಂಗಳೂರು ಪದವಿನಂಗಡಿ ಮನೆಯಲ್ಲಿ ಇಂದು ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.

    1949ರ ಡಿಸೆಂಬರ್ 11ರಂದು ಮಂಗಳೂರಿನಲ್ಲಿ ಜನಿಸಿದ ಗೋಪಾಲನಾಥ್ ಅವರು ಸ್ಯಾಕ್ಸಫೋನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ಅವರು ವಿಶ್ವಪ್ರಸಿದ್ಧಿ ಪಡೆದಿದ್ದರು.

    ಬಾಲ್ಯದಿಂದಲೇ ತಂದೆಯವರಿಂದ ಪಾಠವನ್ನು ಕಲಿತ ಕದ್ರಿ ಗೋಪಾಲನಾಥರು ನಂತರ ಕಲಾನಿಕೇತನದ ಎನ್. ಗೋಪಾಲಕೃಷ್ಣ ಅಯ್ಯರ್ ಅವರಿಂದ ಸಾಕ್ಸಫೋನ್ ವಾದ್ಯದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ನುಡಿಸುವುದನ್ನು ಕಲಿತರು.

    ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ, ಮಂತ್ರಾಲಯ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳನ್ನು ಪಡೆದಿದ್ದರು.

    ಕದ್ರಿ ಗೋಪಾಲನಾಥ್ ಅವರ ಸಾಕ್ಸಫೋನ್ ವಾದಗಳಿಗೆ ಮನಸೋಲದವರಿಲ್ಲ. ಅದರಲ್ಲೂ ಪ್ರವೀಣ್ ಗೋಡ್ಖಿಂಡಿ ಅವರ ಜೊತೆಗಿನ ಜುಗಲ್‍ಬಂದಿ ಅಲ್ಬಂ ರಾಗ್ ರಂಗ್ 1998ರಲ್ಲಿ ಬಿಡುಗಡೆ ಆಯಿತು. ಈ ರಾಗ್ ರಂಗ್ ಈಗಲೂ ಭಾರೀ ಪ್ರಸಿದ್ಧಿ ಪಡೆದಿದ್ದು ಬಹುತೇಕ ಶುಭ ಸಮಾರಂಭ, ಕಾರ್ಯಕಯ್ರಮದ ಉದ್ಘಾಟನೆಯ ಸಮಯದಲ್ಲಿ ಈ ರಾಗ್ ರಂಗ್ ಪ್ಲೇ ಆಗುತ್ತದೆ.

    ಕದ್ರಿ ಗೋಪಾಲನಾಥ್‌ರವರು 1950ರ ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಜೀಪ ಮೂಡ ಗ್ರಾಮದ ಮಿತ್ತಕೆರೆ ಎಂಬಲ್ಲಿ ಜನಿಸಿದರು. ತಂದೆ ತನಿಯಪ್ಪನವರು ನಾಗಸ್ವರ ವಿದ್ವಾಂಸರಾಗಿದ್ದರಿಂದ ಸಂಗೀತವೆಂಬುದು ಗೋಪಾಲನಾಥರ ದಿನಚರಿಯಾಗಿತ್ತು. ತಾಯಿ ಗಂಗಮ್ಮನವರು. ಕದ್ರಿ ಗೋಪಾಲನಾಥರು ಬಾಲ್ಯದಿಂದಲೇ ತಂದೆಯವರಿಂದ ನಾಗಸ್ವರ ಶಿಕ್ಷಣವನ್ನು ಪಡೆದರು. ಆದರೆ ಅವರ ಬದುಕಿಗೆ ತೆರೆದದ್ದು ಮತ್ತೊಂದು ಬಾಗಿಲು. ಒಮ್ಮೆ ಅವರು ಮೈಸೂರು ಅರಮನೆಯ ಬ್ಯಾಂಡ್ ಸೆಟ್ನೊಂದಿಗೆ ಸ್ಯಾಕ್ಸಫೋನ್ ವಾದನವನ್ನು ಕೇಳಿ ಆ ವಾದ್ಯದಲ್ಲಿರುವ ವೈವಿದ್ಯತೆಗೆ ಮನಸೋತು ಸ್ಯಾಕ್ಸಫೋನಿನಲ್ಲಿಯೇ ಪ್ರಾವೀಣ್ಯತೆ ಸಂಪಾದಿಸಬೇಕೆಂಬ ದೃಢ ನಿರ್ಧಾರ ಕೈಗೊಂಡರು. ಇದಕ್ಕಾಗಿ ಅವರು ನಡೆಸಿದ ನಿರಂತರ ತಪಸ್ಸು ಇಪ್ಪತ್ತು ವರ್ಷಗಳದ್ದು. ಕಲಾನಿಕೇತನದ ಎನ್. ಗೋಪಾಲಕೃಷ್ಣ ಅಯ್ಯರ್ ಅವರಿಂದ ಅವರು ಸ್ಯಾಕ್ಸಫೋನ್ ವಾದ್ಯದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ನುಡಿಸುವುದನ್ನು ಕಲಿತರು. ಅತ್ಯಂತ ಶ್ರದ್ಧೆಯಿಂದ ಸಂಗೀತವನ್ನು ಅಭ್ಯಾಸ ಮಾಡಿದ ಗೋಪಾಲನಾಥರು ಕರ್ನಾಟಕ ಸಂಗೀತ ಮತ್ತು ಸ್ಯಾಕ್ಸೊಫೋನ್ ವಾದ್ಯಗಳೆರಡರಲ್ಲೂ ಪ್ರಭುತ್ವ ಸಾಧಿಸಿದರು. ಕದ್ರಿ ಗೋಪಾಲನಾಥರು ಮದ್ರಾಸಿನ ಟಿ. ವಿ. ಗೋಪಾಲಕೃಷ್ಣನ್ ಅವರ ಸಂಪರ್ಕಕ್ಕೆ ಬಂದರು. ಗೋಪಾಲನಾಥರಲ್ಲಿದ್ದ ಅಗಾಧ ಪ್ರತಿಭೆಯನ್ನು ಗಮನಿಸಿದ ಗೋಪಾಲಕೃಷ್ಣನ್ ಅವರು ಕದ್ರಿ ಗೋಪಾಲನಾಥರು ಒಬ್ಬ ಅಂತರರಾಷ್ಟ್ರೀಯ ಪ್ರತಿಭೆಯಾಗಿ ರೂಪುಗೊಳ್ಳಲು ನೀರೆರೆದರು. ಗೋಪಾಲನಾಥರು ತಮ್ಮ ಗುರುಗಳ ಅನುಗ್ರಹವೇ ತಮ್ಮ ಎಲ್ಲಾ ಸಾಧನೆಗಳ ಹಿಂದಿರುವ ಶಕ್ತಿ ಎಂದು ಭಕ್ತಿಯಿಂದ ಸ್ಮರಿಸುತ್ತಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *