ನವೆಂಬರ್ 25 ರಂದು ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

ಮಂಗಳೂರು ನವೆಂಬರ್ 23: ನವೆಂಬರ್ 25 ರಂದು ರಾಮಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ವಿಎಚ್ ಪಿ ಹಾಗೂ ಬಜರಂಗದಳ ಮಂಗಳೂರಿನಲ್ಲಿ ಬೃಹತ್ ಜನಾಗ್ರಹ ಸಭೆ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನ ನೆಹರು ಮೈದಾನ ನಲ್ಲಿ ನಡೆಯಲಿರುವ ಈ ಬೃಹತ್ ಜನಾಗ್ರಹ ಸಭೆಗೆ 25 ಸಾವಿರಕ್ಕೂ ಮಿಕ್ಕಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಭಾಗ ವಹಿಸಲಿದ್ದಾರೆ ಎಂದು ಹೇಳಲಾಗಿದ್ದು, ದಕ್ಷಿಣಕನ್ನಡ ಜಿಲ್ಲೆ ಅಲ್ಲದೆ ಉಡುಪಿ , ಕಾಸರಗೋಡಿನಿಂದಲೂ ಕಾರ್ಯಕರ್ತರು ಈ ಸಭೆಗೆ ಭಾಗವಹಿಸಲಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಕೋಮು ಸೂಕ್ಷ್ಮ ಪ್ರದೇಶವಾಗಿರುವ ಕಾರಣ , ಅಲ್ಲದೆ ಜನಾಗ್ರಹ ಸಭೆ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನವೆಂಬರ್ 25 ರ ಮುಂಜಾನೆ 6 ರಿಂದ ತಡರಾತ್ರಿ 12 ರ ವರೆಗೆ ಮಂಗಳೂರು ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Facebook Comments

comments