Connect with us

    LATEST NEWS

    ಶ್ರೀಕೃಷ್ಣ ಭಕ್ತರಿಗೆ ತೊಂದರೆ ಮಾಡಬೇಡಿ – ಪೊಲೀಸರಿಗೆ ಸೂಚನೆ ನೀಡಿದ ರಕ್ಷಣಾ ಸಚಿವೆ

    ಶ್ರೀಕೃಷ್ಣ ಭಕ್ತರಿಗೆ ತೊಂದರೆ ಮಾಡಬೇಡಿ – ಪೊಲೀಸರಿಗೆ ಸೂಚನೆ ನೀಡಿದ ರಕ್ಷಣಾ ಸಚಿವೆ

    ಉಡುಪಿ ಮಾರ್ಚ್ 26: ಉಡುಪಿ- ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಇಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದರು. ಬೆಳಗ್ಗೆ 9 ಗಂಟೆಗೆ ಕೃಷ್ಣ ಮಠಕ್ಕೆ ಆಗಮಿಸಿದ ನಿರ್ಮಲಾ ಸೀತಾರಾಮನ್ ಅವರು ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀ ಕೃಷ್ಣ ದರ್ಶನ ಮಾಡಿದರು.

    ಈ ಸಂದರ್ಭ ಕನಕನ ಕಿಂಡಿಯ ಮೂಲಕ ಕೃಷ್ಣ ದರ್ಶನಕ್ಕೆ ತರಳಿದ್ದ ನಿರ್ಮಲ ಸೀತಾರಾಮನ್ ಮುಂಭಾಗ ಭಕ್ತರೊಬ್ಬರು ಕೃಷ್ಣ ದರ್ಶನ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಆ ಭಕ್ತರೊಬ್ಬರನ್ನು ಬದಿಗೆ ಕಳುಹಿಸಲು ಮುಂದಾದರು. ಕೂಡಲೇ ಪೊಲೀಸರನ್ನು ರಕ್ಷಣಾ ಸಚಿವೆ ತಡೆದಿದ್ದಾರೆ. ಭಕ್ತನಿಗೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚಿಸಿದ್ದಾರೆ.

    ಎಲ್ಲರಂತೆ ಸರದಿಯಲ್ಲಿ ನಿಂತು ದರ್ಶನ ಕೈಗೊಂಡ ನಿರ್ಮಲಾ ಸೀತಾರಾಮನ್ ನಡೆ ಭಕ್ತರಿಗೆ ಮೆಚ್ಚುಗೆಯಾಗಿದೆ. ನಂತರ ಉಡುಪಿ ಕೃಷ್ಣ ಮಠದ ಕನಕನ ಕಿಂಡಿಯಲ್ಲಿ ಕೃಷ್ಣ ದರ್ಶನ ಮಾಡಿ ತೆರಳಿದ್ದಾರೆ.

    ನಂತರ ಪರ್ಯಾಯ ಪಲಿಮಾರು ಶ್ರೀಗಳನ್ನು ಭೇಟಿ ಮಾಡಿ ಸಮಾಲೋಚನೆ ಮಾಡಿದ್ದಾರೆ. ಈ ಸಂದರ್ಭ ರಕ್ಷಣಾ ಸಚಿವರ ಬಳಿ ಉಡುಪಿಗೆ ಅಭಿನಂದನ್ ವರ್ಧಮಾನ್ ರನ್ನು ಕಳುಹಿಸಿಕೊಡಿ ಎಂದು ವಿನಂತಿಸಿದ್ದಾರೆ.

    ಅಭಿನಂದನ್ ನನ್ನು ಉಡುಪಿಗೆ ಕಳುಹಿಸಿಕೊಡಿ, ವಿಂಗ್ ಕಮಾಂಡರ್ ಅಭಿನಂದನ್ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಪಾಕಿಸ್ತಾನದ ನೆಲದಲ್ಲೂ ಎದೆಗುಂದದೆ ದೇಶದ ಗೌರವ ಕಾಪಾಡಿದ್ದಾರೆ. ಅಭಿನಂದನ್ ದಿಟ್ಟತನವನ್ನು ವಿಶ್ವವೇ ಕೊಂಡಾಡಿದೆ.

    ಕೃಷ್ಣಮಠದಲ್ಲಿ ಅಭಿನಂದನ್ ಗೆ ಗೌರವಾರ್ಪಣೆ ಮಾಡಬೇಕು ಎಂಬ ಇಚ್ಛೆಯಿದೆ ಎಂದರು. ಕೃಷ್ಣ ಮಠಕ್ಕ ಚಿನ್ನದ ಮಹಡಿಯ ನಿರ್ಮಾಣ ಆಗುತ್ತಿದೆ. ಬ್ರಹ್ಮಕಲಶೋತ್ಸವ ಸಂದರ್ಭ ಅಭಿನಂದನ್ ಗೆ ಮಠದ ಗೌರವ ಕೊಡುವ ಆಕಾಂಕ್ಷೆಯಿದೆ ಎಂದು ಸ್ವಾಮೀಜಿ ಹೇಳಿದರು.

    ನಿಮ್ಮ ಕಾಲಾವಧಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಮಹತ್ವದ್ದು. ಉಗ್ರರಿಗೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡುವ ಅಗತ್ಯ ಇದೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ನಿರ್ಮಲಾ ಸೀತಾರಾಮನ್, ಇಲಾಖೆಗೆ ಕಾನೂನಾತ್ಮಕ ಅಡೆ ತಡೆ ಇಲ್ಲದಿದ್ದರೆ ಕಳುಹಿಸಿಕೊಡುತ್ತೇವೆ. ರಕ್ಷಣಾ ಇಲಾಖೆಗೆ ಈ ಬಗ್ಗೆ ಒಂದು ಪತ್ರ ಬರೆಯಿರಿ ಎಂದರು.

    ಆಧ್ಯಾತ್ಮಿಕ ಶ್ರೀಗಳಲ್ಲಿ ನನ್ನ ಲೌಕಿಕ ವಿನಂತಿಯಿದೆ. ಈ ಬಾರಿ ಕೃಷ್ಣನಲ್ಲಿ ದೇಶಕ್ಕಾಗಿ ಪ್ರಾರ್ಥಿಸಬೇಕು. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕು. ದೇಶ ಸುರಕ್ಷಿತರ ಕೈಯ್ಯಲ್ಲಿರುವಂತೆ ದೇವರಲ್ಲಿ ಪ್ರಾರ್ಥಿಸಿ ಎಂದು ರಕ್ಷಣಾ ಸಚಿವರು ವಿನಂತಿಸಿದರು. ಗುರುಗಳ ಬಳಿ ರಾಜಕೀಯ ಮಾತನಾಡಬಾರದು. ಆದ್ರೂ ಮತ್ತೆ ಬಿಜೆಪಿ ಸರಕಾರ ರಚನೆಯಾಗುವಂತೆ ಆಶೀರ್ವದಿಸಿ ಎಂದು ಪರ್ಯಾಯ ವಿದ್ಯಾಧೀಶ ಸ್ವಾಮೀಜಿಯಲ್ಲಿ ಸಚಿವೆ ಮನವಿ ಮಾಡಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *