Connect with us

    LATEST NEWS

    ಅತ್ತಾವರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆ

    ಅತ್ತಾವರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆ

    ಮಂಗಳೂರು ಅಕ್ಟೋಬರ್ 26: ನರ್ಸಿಂಗ್ ವಿಧ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅತ್ತಾವರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.

    ಕೇರಳದ ಎರ್ನಾಕುಲಂ ಮೂಲದ ಅನುಪಮಾ(23) ಆತ್ಮಹತ್ಯೆ ಮಾಡಿಕೊಂಡ ನರ್ಸಿಂಗ್ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
    ನಿನ್ನೆ ರಾತ್ರಿ ಸುಮಾರು 11ರ ವೇಳೆಗೆ ವಿದ್ಯಾರ್ಥಿನಿ ವಾಸವಿರುವ ರೂಂ ಬಾಗಿಲನ್ನು ತೆರೆದು ನೋಡಿದಾಗ ವಿದ್ಯಾರ್ಥಿನಿ ಮೃತದೇಹ ಫ್ಯಾನಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಕಂಡುಬಂದಿದೆ.

    ಅನುಪಮಾ ನಗರದ ಖಾಸಗಿ ಆಸ್ಪತ್ರೆಯ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದು, ಇವರ ತಾಯಿ ವಿದೇಶದಲ್ಲಿದ್ದಾರೆ ಎಂದು ತಿಳಿದುಬಂದಿದೆ. ವಿಧ್ಯಾರ್ಥಿನಿ ಅತ್ತಾವರದ ಅಪಾರ್ಟ್‌ಮೆಂಟಿನಲ್ಲಿ ಕಳೆದ ಒಂದು ವರ್ಷದಿಂದ ವಾಸವಿದ್ದಳು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *