DAKSHINA KANNADA
ಕಡಬ – ಹಠಾತ್ ಕುಸಿದು ಬಿದ್ದು ಸಾವನಪ್ಪಿದ ನರ್ಸಿಂಗ್ ವಿಧ್ಯಾರ್ಥಿನಿ
ಕಡಬ, ಜೂ.02: 18 ವರ್ಷ ವಯಸ್ಸಿನ ನರ್ಸಿಂಗ್ ವಿಧ್ಯಾರ್ಥಿನಿಯೊಬ್ಬಳು ಹಠಾತ್ ಕುಸಿದು ಬಿದ್ದು ಸಾವನಪ್ಪಿದ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತಳನ್ನು ರಶ್ಮಿತಾ(18) ಎಂದು ಗುರುತಿಸಲಾಗಿದೆ. ಈಕೆ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಈಕೆಗೆ ಕೆಲ ದಿನಗಳಿಂದ ಅನಾರೋಗ್ಯ ಪೀಡಿತಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲ. ಆರೋಗ್ಯವಾಗಿದ್ದ ರಶ್ಮಿತಾ ಗುರುವಾರ ರಾತ್ರಿ ಹಠಾತ್ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.