FILM
ಗಂಡು ಮಗುವಿಗೆ ಜನ್ಮ ನೀಡಿದ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್

ಕೋಲ್ಕತ್ತ : ಮದುವೆ ವಿಚಾರದಲ್ಲಿ ಭಾರೀ ವಿವಾದ ಸೃಷ್ಠಿಸಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಹಾಗೂ ನಟಿ ನುಸ್ರತ್ ಜಹಾನ್ ಕೋಲ್ಕತ್ತದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಕೋಲ್ಕತ್ತದ ಪಾರ್ಕ್ ಸ್ಟ್ರೀಟ್‌ನಲ್ಲಿರುವ ಆಸ್ಪತ್ರೆಗೆ ಬುಧವಾರ ಸಂಜೆ ನುಸ್ರತ್ ಜಹಾನ್ ದಾಖಲಾಗಿದ್ದರು. ಅವರು ಗುರುವಾರ ಮಧ್ಯಾಹ್ನ 12.20ರ ಸುಮಾರಿಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ನುಸ್ರತ್ ಮತ್ತು ಉದ್ಯಮಿ ನಿಖಿಲ್ ಜೈನ್ 2019ರಲ್ಲಿ ಟರ್ಕಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆ ಬಳಿಕ ಕೆಲ ಕಾರಣಗಳಿಂದ ಇವರಿಬ್ಬರ ನಡುವೆ ಪರಸ್ಪರ ಬಿರುಕು ಮೂಡಿ ಬೇರೆ ಬೇರೆಯಾಗಿದ್ದರು ಎಂಬ ಸುದ್ದಿ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.
ಈ ಕುರಿತಂತೆ ನುಸ್ರತ್ ನಿಖಿಲ್ ಜೈನ್ ಜೊತೆಗಿನ ಮದುವೆಗೆ ಯಾವುದೇ ಮಾನ್ಯತೆ ಇಲ್ಲ. ಟರ್ಕಿಯಲ್ಲಿ ಮದುವೆ ನಡೆದಿದ್ದು, ಟರ್ಕಿ ಕಾನೂನಿನ ಪ್ರಕಾರ ಇದಕ್ಕೆ ಮಾನ್ಯತೆ ಇಲ್ಲ. ಭಾರತದಲ್ಲೂ ಅಧಿಕೃತವಾಗಿ ಯಾವುದೇ ಕಾನೂನಿನ ಪ್ರಕಾರ ನಾವು ಮದುವೆ ಆಗಿಲ್ಲ ನಮ್ಮದು ಲಿವ್ ಇನ್ ರಿಲೇಷನ್ ಶಿಪ್ ಅಷ್ಟೇ ಎಂದಿದ್ದರು
ನುಸ್ರತ್ ಜಹಾನ್ ಅವರು ನಟ ಯಶ್ ದಾಸ್ ಗುಪ್ತಾ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.