KARNATAKA
ಸಿಎಂ ವಿರುದ್ಧ ಆಕ್ಷೇಪಾರ್ಹ ಟ್ವೀಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್..!
ಬೆಂಗಳೂರು, ಜುಲೈ 28: ಉಡುಪಿಯ ಕಾಲೇಜೊಂದರ ಟಾಯ್ಲೆಟ್ನಲ್ಲಿ 3 ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಸುತ್ತ ನಾನಾ ವಿವಾದಗಳು ಹುಟ್ಟಿಕೊಳ್ಳುತ್ತಿವೆ.
ಕೆಲವರು ರಾಜ್ಯಸರ್ಕಾರದ ಮೇಲೆ ಆರೋಪ ಮಾಡಿದರೆ ಇನ್ನೂ ಕೆಲವರು ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ವಿರುದ್ಧ ಮಾತನಾಡುತ್ತಿದ್ದಾರೆ. ಈ ನಡುವೆ ಬಿಜೆಪಿಯ ಕಾರ್ಯಕರ್ತೆಯೊಬ್ಬರು, ಸಿದ್ದರಾಮಯ್ಯ ಮತ್ತು ಕುಟುಂಬ ವಿರುದ್ದ ಹಗುರವಾಗಿ ಮಾತನಾಡಿ ಜೈಲು ಸೇರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್‌ನಲ್ಲಿ ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಹನುಮಂತಯ್ಯ ಎಂಬ ಯುವ ಕಾಂಗ್ರೆಸ್ ಕಾರ್ಯಕರ್ತ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಐಪಿಸಿ ಸೆಕ್ಷನ್ 509 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯ ಘನತೆಗೆ ಧಕ್ಕೆ ನೀಡಿದ ಆರೋಪದಡಿ ಕೇಸ್ ದಾಖಲಾಗಿದ್ದು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾರ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.