Connect with us

LATEST NEWS

ರಾಜ್ಯಸಭಾ ಸದಸ್ಯ ಕಾಂಗ್ರೇಸ್ ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಇನ್ನಿಲ್ಲ ….!!

ಮಂಗಳೂರು ಸೆಪ್ಟೆಂಬರ್ 13: ಕಾಂಗ್ರೇಸ್ ನ ಹಿರಿಯ ಮುಖಂಡ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಹಾಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್(80) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.


ಜುಲೈ 18 ರಂದು ಮನೆಯಲ್ಲಿ ಯೋಗ ಮಾಡುತ್ತಿರುವ ಸಂದರ್ಭ ಆಯತಪ್ಪಿ ಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭ ಅವರ ತಲೆ ಒಳಭಾಗಕ್ಕೆ ಪೆಟ್ಟಾಗಿದ್ದು, ನಂತರ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ತಲೆಯ ಒಳಗೆ ರಕ್ತಸ್ರಾವವಾಗಿರುವುದು ತಿಳಿದು ಬಂದಿತ್ತು. ಮೆದುಳಿನಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆಯಲು ವೈದ್ಯರು ಸರ್ಜರಿ ಮಾಡಿದ್ದರು.ಆ ಬಳಿಕ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿಕಟವರ್ತಿಗಳಲ್ಲಿ ಒಬ್ಬರಾಗಿದ್ದ ಆಸ್ಕರ್ ತಮ್ಮ ಐದು ದಶಕಗಳ ರಾಜಕೀಯ ಬದುಕಿನಲ್ಲಿ ಆಸ್ಕರ್ ಫೆರ್ನಾಂಡಿಸ್ ಸತತ ಐದು ಬಾರಿ ಉಡುಪಿಯ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರೆ, 1998ರಿಂದ ಸತತ ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. 2016ರ ಜುಲೈನಲ್ಲಿ ನಾಲ್ಕನೇ ಬಾರಿಗೆ ಆಯ್ಕೆಯಾದ ಇವರ ಸದಸ್ಯತ್ವ ಅವಧಿ 2022ರ ಜೂ.30ರವರೆಗೆ ಇತ್ತು.

ಆಸ್ಕರ್ ಫೆರ್ನಾಂಡಿಸ್ ಅವರು ಪತ್ನಿ ಬ್ಲೋಸಮ್ ಫೆರ್ನಾಂಡಿಸ್, ಪುತ್ರ ಹಾಗೂ ಪುತ್ರಿಯೊಂದಿಗೆ ಅಪಾರ ಸಂಖ್ಯೆಯ ಬಂಧುಮಿತ್ರರು, ನಿಕಟವರ್ತಿಗಳು, ಅಭಿಮಾನಿಗಳು ಹಾಗೂ ಹಿಂಬಾಲಕರನ್ನು ಅಗಲಿದ್ದಾರೆ.