LATEST NEWS
ಓಡಿಶಾ – ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವು…!!

ಓಡಿಶಾ ಜೂನ್ 26: ಎರಡು ಬಸ್ಸುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ.
ಒಡಿಶಾದಿಂದ ಸುಮಾರು 35 ಕಿಮೀ ದೂರದಲ್ಲಿರುವ ಬರ್ಹಾಂಪುರ-ತಪ್ತಪಾಣಿ ರಸ್ತೆಯ ದಿಗಪಹಂಡಿ ಪ್ರದೇಶದ ಬಳಿ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ ಎಂದು ಬರ್ಹಾಂಪುರ ಪೊಲೀಸ್ ವರಿಷ್ಠಾಧಿಕಾರಿ ಎಂ. ಶರವಣ ವಿವೇಕ್ ತಿಳಿಸಿದ್ದಾರೆ.

ಬರ್ಹಾಂಪುರದಲ್ಲಿ ವಿವಾಹಮಹೋತ್ಸವ ಮುಗಿಸಿಕೊಂಡು ಪ್ರಯಾಣಿಕರು ದಿಗಪಹಂಡಿ ಬಳಿಕ ಖಂಡದೇಲಿಗೆ ಹಿಂದಿರುಗುತ್ತಿದ್ದರು, ಈ ವೇಳೆ ಅಪಘಾತ ಸಂಭವಿಸಿದೆ. ಇದರಲ್ಲಿ ಒಂದೇ ಕುಟುಂಬದ 7 ಮಂದಿ ಸೇರಿ 12 ಮಂದಿ ಮೃತಪಟ್ಟಿದ್ದಾರೆ. 7 ಮಂದಿ ಗಾಯಗೊಂಡಿದ್ದು, ಅವರನ್ನ ಎಂಕೆಸಿಜಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.