Connect with us

LATEST NEWS

ಹೊಸ ಮಾರ್ಗಸೂಚಿ ಬೆನ್ನಲ್ಲೆ..ಅಂಗಡಿಗಳನ್ನು ಮುಚ್ಚಿಸಿದ ಅಧಿಕಾರಿಗಳು….!!

ಮಂಗಳೂರು/ಉಡುಪಿ ಎಪ್ರಿಲ್ 22: ರಾಜ್ಯ ಸರಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೆ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದು, ಅಗತ್ಯ ಸೇವೆಗಳ ಅಂಗಡಿಗಳನ್ನು ಬಿಟ್ಟು ಮತ್ತೆಲ್ಲಾ ಅಂಗಡಿಗಳನ್ನು ಬಾಗಿಲು ಹಾಕಿಸುತ್ತಿದ್ದಾರೆ.


ಕಂದಾಯ ಇಲಾಖೆ ಡೆಪ್ಯುಟಿ ಕಮೀಷನರ್ ಬಿನೋಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಸೆಂಟ್ರಲ್ ಮಾರುಕಟ್ಟೆ ಸುತ್ತಮುತ್ತದ ಅಂಗಡಿಗಳಿಗೆ ತೆರಳಿದ ಅಧಿಕಾರಿಗಳು ಸರ್ಕಾರದ ಪರಿಷ್ಕೃತ ಮಾರ್ಗಸೂಚಿ ಬಗ್ಗೆ ಮನವರಿಕೆ ಮಾಡಿ ಅಂಗಡಿ ಮುಚ್ಚಿಸಲು ಸೂಚಿಸಿದರು.


ಉಡುಪಿ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಅಗತ್ಯ ಸೇವೆಗಳ ಹೊರತು ಉಳಿದೆಲ್ಲಾ ಅಂಗಡಿಗಳನ್ನು ಬಂದ್‌ ಮಾಡುವಂತೆ ಸೂಚಿಸುತ್ತಿದ್ದಾರೆ. ಉಡುಪಿ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದು, ದಿನಸಿ, ಹಾಲು, ತರಕಾರಿ ಅಂಗಡಿಗಳ ವ್ಯಾಪಾರಕ್ಕೆ ಮಾತ್ರ ಅವಕಾಶ. ಬಟ್ಟೆ, ಚಪ್ಪಲ್‌‌, ಫ್ಯಾನ್ಸಿ, ಜ್ಯುವೆಲ್ಲರಿ ಶಾಪ್‌ ಬಂದ್‌ ಮಾಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ.


ಕೊರೊನಾ ಮಾರ್ಗಸೂಚಿಯ ಉಲ್ಲಂಘನೆ ಕಂಡುಬಂದಲ್ಲಿ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದು ನಗರಸಭೆ ಅಧಿಕಾರಿಗಳು ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು ಆಸ್ಪತ್ರೆಯಿಂದ ಮುಖ್ಯಮಂತ್ರಿ ಡಿಸ್ಟಾರ್ಜ್ ಆಗುತ್ತಿದ್ದಂತೆಯೇ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಅದರ ಪ್ರಕಾರ ದಿನಸಿ, ಹಣ್ಣು, ತರಕಾರಿ ಡೈರಿ, ಮುಂತಾದ ಅಗತ್ಯ ಸಾಮಾಗ್ರಿಗಳ ಅಂಗಡಿ ಹೊರತುಪಡಿಸಿ ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋ ರೂಮ್, ಬ್ಯಾಂಗಲ್ಸ್ ಸ್ಟೋರ್, ಚಿನ್ನದ ಅಂಗಡಿ ಬುಕ್ ಶಾಪ್, ಚಪ್ಪಲಿ ಅಂಗಡಿಗಳು, ಫ್ಯಾನ್ಸಿ ಸ್ಟೋರ್, ಬಟ್ಟೆ ಅಂಗಡಿಗಳು ಇತ್ಯಾದಿ ಬಂದ್ ಮಾಡುವಂತೆ ಸೂಚಿಸಿದೆ.