LATEST NEWS
ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಒತ್ತಾಯ
ಮಂಗಳೂರು ಫೆಬ್ರವರಿ 16: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಬೆಳ್ತಂಗಡಿ ಕ್ಷೇತ್ರಗಳಲ್ಲಿ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘವು ಪ್ರಮುಖ ರಾಜಕೀಯ ಪಕ್ಷಗಳನ್ನು ಒತ್ತಾಯಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಲೋಕಯ್ಯ ಗೌಡ, ಪುತ್ತೂರು ತಾಲ್ಲೂಕಿನ ಒಟ್ಟು ಜನಸಂಖ್ಯೆಯಲ್ಲಿ ಶೇ 50ರಷ್ಟು, ಸುಳ್ಯ ತಾಲ್ಲೂಕಿನಲ್ಲಿ ಶೇ 65ರಷ್ಟು ಹಾಗೂ ಬೆಳ್ತಂಗಡಿ ತಾಲ್ಲೂಕಿನಲ್ಲಿ ಶೇ 45ರಷ್ಟು ಮತದಾರರು ಗೌಡ ಜನಾಂಗದವರು ಇದ್ದು, ಮಂಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 3.5 ಲಕ್ಷದಷ್ಟು ಮತದಾರರು ನಮ್ಮ ಸಮುದಾಯವರು ಇದ್ದಾರೆ. ಆದರೂ ರಾಜಕೀಯವಾಗಿ ನಮ್ಮ ಸಮಾಜವನ್ನು ಕಡೆಗಣಿಸಲಾಗಿದೆ ಎಂದರು. ಹೀಗಾಗಿ ಈ ಬಾರಿ ಪುತ್ತೂರು ಮತ್ತು ಬೆಳ್ತಂಗಡಿ ಕ್ಷೇತ್ರಗಳಲ್ಲಿ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ವಿವಿಧ ರಾಜಕೀಯ ಪಕ್ಷಗಳ ಮುಖಂಡರನ್ನು ಒತ್ತಾಯಿಸಿದ್ದಾರೆ.