DAKSHINA KANNADA
ಸೌಜನ್ಯಾ ಮರು ತನಿಖೆಗೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ..!

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮರುತನಿಖೆ ಮಾಡುವಂತೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಎರಡು ದಿನಗಳ ಧರಣಿ ಕಾರ್ಯಕ್ರಮ ಮಂಗಳೂರಿನಲ್ಲಿ ಆರಂಭವಾಗಿದೆ.
ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮರುತನಿಖೆ ಮಾಡುವಂತೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಎರಡು ದಿನಗಳ ಧರಣಿ ಕಾರ್ಯಕ್ರಮ ಮಂಗಳೂರಿನಲ್ಲಿ ಆರಂಭವಾಗಿದೆ.

ನಗರದ ಮಿನಿ ವಿಧಾನ ಸೌಧದ ಎದುರು ಆರಂಭಗೊಂಡ ಈ ಧರಣಿಯಲ್ಲಿ ಒಕ್ಕಲಿಗರ ಸಮುದಾಯದ ಅನೇಕ ಮಹನೀಯರು ಪಾಲ್ಗೊಂಡಿದ್ದರು. ಸೌಜನ್ಯಾ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರ ಮೂಲಕ ಮರುತನಿಖೆಮಾಡಬೇಕು .
ಈ ಹಿಂದೆ ಸೌಜನ್ಯ ತನಿಖೆ ಮಾಡಿದ ತನಿಖಾಧಿಕಾರಿಯನ್ನು ಕೂಡ ತನಿಖೆಗೆ ಒಳಪಡಿಸಬೇಕು.
ಮರು ತನಿಖೆಗೆ ಆದೇಶ ಮಾಡುವವರೆಗೂ ಹೋರಾಟ ಮುಂದುವರಿಸಲಾಗುವುದು ಮತ್ತು ಅಗತ್ಯ ಬಿದ್ದರೆ ಕಾನೂನಾತ್ಮಕ ಹೋರಾಟವನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ ಹೇಳಿಕೆ ನೀಡಿದೆ.