ಒಂಟಿ ವೃದ್ದೆಯ ಕೊಲೆ ಮಾಡಿ ಚಿನ್ನಾಭರಣ ದೋಚಿದ ಕಳ್ಳರು

ಉಡುಪಿ ಫೆಬ್ರವರಿ 13: ಉಡುಪಿಯಲ್ಲಿ ಒಂಟಿ ವೃದ್ದೆಯನ್ನು ಕೊಲೆ ಮಾಡಿ ಚಿನ್ನಾಭರಣ ದರೋಡೆಗೈದು ಪರಾರಿಯಾಗಿರುವ ಘಟನೆ ನಡೆದಿದೆ.

ಉಡುಪಿಯ ನಿಟ್ಟೂರು ವಿಷ್ಣುಮೂರ್ತಿ ನಗರದಲ್ಲಿ ಈ ಘಟನೆ ನಡೆದಿದ್ದು, ಮಾಲತಿ ಕಾಮತ್ ಕೊಲೆಯಾದ ದುರ್ದೈವಿ ವೃದ್ಧೆ. ಮನೆಯಲ್ಲಿ ಮಾಲತಿ ಕಾಮತ್ ಅವರು ಒಂಟಿಯಾಗಿದ್ದ ಸಂದರ್ಭ ನೋಡಿ ಕಳ್ಳರು ಮನೆ ನುಗ್ಗಿದ್ದು, ಮಾಲತಿ ಅವರನ್ನು ಕೊಲೆ ಮಾಡಿ ಚಿನ್ನಾಭರಣವನ್ನು ದೋಚಿದ್ದಾರೆ.

ವೃದ್ಧೆಯ ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸಹಕರಿಸಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.