LATEST NEWS
ಮಲ್ಪೆ – ಒಂಟಿ ವೃದ್ಧೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ…!
ಉಡುಪಿ: ಮಲ್ಪೆಯ ಕೊಳ ಎಂಬಲ್ಲಿ ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವೃದ್ಧೆ ಮೃತಪಟ್ಟು ಕೆಲವು ದಿನಗಳಾಗಿದ್ದು ಸಾವಿಗೆ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ. ಮೃತ ವೃದ್ಧೆಯನ್ನು ಗೀತಾ (64 ) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸ್ ಠಾಣಾಧಿಕಾರಿ ಸಕ್ತಿವೇಲು ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಕಳೇಬರವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೆನ್ಸ್ ಸೇವೆ ಒದಗಿಸಿ ನೆರವಾದರು.
You must be logged in to post a comment Login