Connect with us

LATEST NEWS

ಆಕಸ್ಮಿಕವಾಗಿ ಬಾವಿಗೆ ಬಿದ್ದ ವೃದ್ದೆಯನ್ನುಎಸ್‍ಐ ಸೇರಿ ಮೂವರಿಂದ ರಕ್ಷಣೆ

ಉಡುಪಿ ಅಗಸ್ಟ್ 6: ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ವೃದ್ದೆಯೊಬ್ಬರನ್ನು ಎಸ್ ಐ ಸೇರಿ ಇಬ್ಬರು ಯುವಕರು ರಕ್ಷಿಸಿರುವ ಘಟನೆ ನಡೆದಿದೆ.


ನಗರದ ಹೊರ ವಲಯದ ಕುಕ್ಕಿಕಟ್ಟೆ ಮಾರ್ಪಳ್ಳಿಯಲ್ಲಿ ವೃದ್ಧೆ ತಮ್ಮ ಮನೆಯ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದರು. ಘಟನೆ ನಡೆದ ಕೂಡಲೇ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿಲಾಗಿದೆ. ಉಡುಪಿ ನಗರ ಠಾಣೆಯ ಪಿ.ಎಸ್.ಐ ಸದಾಶಿವ ರಾ. ಗವರೋಜಿ ತಕ್ಷಣ ಸ್ಥಳಕ್ಕಾಗಮಿಸಿದ್ದಾರೆ.

ನಂತರ ಬಾವಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ವೃದ್ಧೆಯನ್ನು ಉಡುಪಿ ನಗರ ಠಾಣೆಯ ಪಿ.ಎಸ್.ಐ ಸೇರಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ವಿನಾಯಕ ಹಾಗೂ ಸ್ಥಳಿಯ ಆಟೋ ಚಾಲಕ ರಾಜೇಶ್ ನಾಯಕ್ ಬಾವಿಗಿಳಿದು ರಕ್ಷಿಸಿದ್ದಾರೆ.
ತುರ್ತು ಜೀವರಕ್ಷಣೆ ಕಾರ್ಯಚರಣೆಯಲ್ಲಿ ಸಾಹಸ ಮೆರೆದಿರುವ ಜೀವರಕ್ಷಕರಿಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ.

 

Facebook Comments

comments