Connect with us

LATEST NEWS

ಓಎಲ್ಎಕ್ಸ್ ಕಾರು ಮಾರಾಟದ ವಂಚಕ ಸೆರೆ – 8 ಮೊಬೈಲ್ ಸಿಮ್ 21 ಬ್ಯಾಂಕ್ ಗಳಲ್ಲಿ ಖಾತೆ

ಮಂಗಳೂರು ಜೂನ್ 29: ಓಎಲ್ ಎಕ್ಸ್ ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸೆನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಬನವಾಸಿ, ಸರ್ಕಾರಿ ಆಸ್ಪತ್ರೆ ಹತ್ತಿರದ ಸೊರಬಾ ರಸ್ತೆ ನಿವಾಸಿ ರವಿಚಂದ್ರ ಮಂಜುನಾಥ ರೇವಣಕರ(29) ಎಂದು ಗುರುತಿಸಲಾಗಿದೆ. ಓಎಲ್ಎಕ್ಸ್ ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಸುಮಾರು 2.50 ಲಕ್ಷ ವಂಚನೆ ಆಗಿರುವ ಕುರಿತು ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕಾರು ಮಾರಾಟದ ಹೆಸರಿನಲ್ಲಿ ಓಎಲ್ಎಕ್ಸ್ ನಲ್ಲಿ ವಂಚನೆ ಮಾಡಿದ ಆರೋಪಿಯ ಜಾಡು ಹಿಡಿಯಲು ಮುಂದಾಗಿದ್ದು,ಆರೋಪಿಯ ಕುರಿತಂತೆ ಸಂಪೂರ್ಣ ಮಾಹಿತಿ ಪಡೆದ ಪೊಲೀಸರು ಆರೋಪಿ ಹೊಸಪೇಟೆಯಲ್ಲಿರುವ ಬಗ್ಗೆ ಮಾಹಿತಿ ತಿಳಿದುಬಂದಿದ್ದು, ಕೂಡಲೇ ಬೇರೆ ಪ್ರಕರಣದಲ್ಲಿ ಹೊಸಪೇಟೆ ಹತ್ತಿರ ಆರೋಪಿ ಪತ್ತೆ ಕರ್ತವ್ಯದ್ದಲ್ಲಿದ್ದ ಸೆನ್ ಪೊಲೀಸ್ ಠಾಣಾ ತನಿಖಾ ತಂಡವನ್ನು ಹೊಸಪೇಟೆಗೆ ಕಳುಹಿಸಿ ಆರೋಪಿತ ರವಿಚಂದ್ರ ಮಂಜುನಾಥ ರೇವಣಕರ ನನ್ನು ವಶಕ್ಕೆ ಪಡೆದು ಸೆನ್ ಪೊಲೀಸ್‍ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ.

ತನಿಖೆಯ ವೇಳೆ ಆರೋಪಿತನು ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 21 ಬ್ಯಾಂಕ್ ಖಾತೆಗಳುನ್ನು ಹೊಂದಿದ್ದು, ಹಾಗೂ 08 ಸಿಮ್ ಕಾರ್ಡ್‍ ಗಳು ಬಳಕೆ ಮಾಡಿದ್ದು ಕಂಡು ಬಂದಿರುತ್ತದೆ. ಸದ್ರಿ 08 ಮೊಬೈಲ್ ನಂಬ್ರ ಗಳ ಮೇಲೆ 80 ಕ್ಕೂ ಹೆಚ್ಚಿನ ಸೈಬರ್ ವಂಚನೆ ದೂರುಗಳು ದಾಖಲಾಗಿರುವುದು ತಿಳಿದುಬಂದಿರುತ್ತದೆ.

ಆರೋಪಿತನು ಕಳೆದ 03 ವರ್ಷಗಳಿಂದ OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ತಾನು ಉಪಯೋಗಿಸುತ್ತಿದ್ದ ಮೊಬೈಲ್ ನ್ನು ಕೆಲವು ದಿನಗಳ ಮಟ್ಟಿಗೆ ಇಟ್ಟುಕೊಂಡು ಅದನ್ನು ಮಾರಾಟ ಮಾಡುತ್ತಿದ್ದು, ಹೊಸ ಸಿಮ್‍ ಗಳನ್ನು ಉಪಯೋಗಿಸುತ್ತಿರುವುದು ಕಂಡುಬಂದಿರುತ್ತದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *