Connect with us

LATEST NEWS

ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಓಮ್ನಿ ಕಾರು ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರು ಮೇ 28: ಮಂಗಳೂರು ಹೊರವಲಯದ ಅಡ್ಯಾರ್ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.


ಮೃತಪಟ್ಟವರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಯಾರ್ ಮಾಂಡೋವಿ ಕಾರು ಶೋ ರೂಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವೃತೆಗೆ ಓಮ್ಮಿ ಸಂಪೂರ್ಣ ನಚ್ಚುಗುಚ್ಚಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನಪ್ಪಿದ್ದಾರೆ.

ಕಾರಿನಲ್ಲಿದ್ದವರು ಒಣ ಮೀನಿನ ವ್ಯಾಪಾರಿಗಳು ಎಂದು ಹೇಳಲಾಗಿದ್ದು, ವ್ಯಾಪಾರ ಮುಗಿಸಿ ಫರಂಗಿಪೇಟೆಗೆ ತೆರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.