DAKSHINA KANNADA
ಏಪ್ರಿಲ್ 14 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ..!

ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು ಏ.14ರಂದು ಬೆಂಗಳೂರಿನಲ್ಲಿ ಮೆಗಾ ರೋಡ್ ಶೋ, ಮಂಗಳೂರಿನಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರು : ಬಿಸಿಲ ಬೇಗೆಯ ಮಧ್ಯೆ ಲೋಕಸಭಾ ಚುನಾವಣೆಯ ಕಾವು ಕೂಡ ದಿನದಿಂದ ದಿನಕ್ಕೆ ಏರುತ್ತಲಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟ ಮೂರನೇ ಬಾರಿ ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಉತ್ಸುಕವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಬಿಡುವಿಲ್ಲದೆ ಚುನಾವಣಾ ರಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ.

ಇದೀಗ ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು ಏ.14ರಂದು ಬೆಂಗಳೂರಿನಲ್ಲಿ ಮೆಗಾ ರೋಡ್ ಶೋ, ಮಂಗಳೂರಿನಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಮೋದಿ ಆಗಮನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲಿದೆ.
ಲೋಕಸಭೆಯ ಚುನಾವಣೆಯ ಕಾವು ಏರುವ ಮೊದಲೇ ಮೋದಿ ಅವರು ಮಾ.16ರಂದು ಕಲಬುರಗಿಗೆ ಆಗಮಿಸಿ ಪಕ್ಷದ ಪರ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅದೇ ದಿನ ಚುನಾವಣಾ ವೇಳಾಪಟ್ಟಿ ಘೋಷಣೆಯಾಯಿತು. ನಂತರ ಮಾ.18ರಂದು ಶಿವಮೊಗ್ಗಕ್ಕೆ ಆಗಮಿಸಿ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿದ್ದರು.ಇದೀಗ ಮಂಗಳೂರಿನಲ್ಲಿ ಮೋದಿ ಪ್ರಚಾರ ನಡೆಸುವುದು ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ರವರಿಗೆ ಲಾಭವಾಗಲಿದೆ ಎಂದು ಹೇಳಲಾಗಿದೆ.