DAKSHINA KANNADA
ಮಾರ್ಚ್ 5 ರಂದು ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಎಸ್.ಟಿ. ಮೋರ್ಚ್ ದ ಸಮಾವೇಶ

ಪುತ್ತೂರು, ಮಾರ್ಚ್ 03: ಮಾರ್ಚ್ 5 ರಂದು ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಎಸ್.ಟಿ. ಮೋರ್ಚ್ ದ ಸಮಾವೇಶ ಪುತ್ತೂರಿನ ಒಕ್ಕಲಿಗ ಗೌಡ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಿಜೆಪಿ ಎಸ್.ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ನಾಯ್ಕ್ ಹೇಳಿದರು.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ನೇತ್ರತ್ವದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರ ಎಸ್.ಟಿ ಸಮುದಾಯಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸಮಾಜದ ಏಳಿಗೆಗೆ ನಿರಂತರವಾಗಿ ಶ್ರಮಿಸಿದೆ ಎಂದ ಅವರು ಎಸ್.ಟಿ ಸಮಾಜಕ್ಕೆ ಹಲವು ಯೋಜನೆಗಳನ್ನು ನೀಡಿದ ಬಿಜೆಪಿ ಸರಕಾರವನ್ನು ಅಭಿನಂದಿಸುವ ಕಾರ್ಯಕ್ರಮವೂ ಸಮಾವೇಶದಲ್ಲಿ ನಡೆಯಲಿದೆ ಎಂದರು.

ಸಮಾವೇಶದ ಅಧ್ಯಕ್ಷತೆಯನ್ನು ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ವಹಿಸಲಿದ್ದು, ರಾಜ್ಯ ಮಟ್ಟದ ನಾಯಕರು ಉಪಸ್ಥಿತರಿರಲಿದ್ದಾರೆ ಎಂದರು. ಸಮಾವೇಶದಲ್ಲಿ 5 ಸಾವಿರಕ್ಕೂ ಮಿಕ್ಕಿದ ಎಸ್.ಟಿ ಮೋರ್ಚಾದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.