Connect with us

    KARNATAKA

    ಬುಧವಾರ ಬೆಳಗ್ಗೆ 10 ಗಂಟೆಗೆ ‘ದ್ವಿತೀಯ PUC ಪರೀಕ್ಷೆಯ ಫಲಿತಾಂಶ ಪ್ರಕಟ

    ಬೆಂಗಳೂರು, ಏಪ್ರಿಲ್ 09: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ  ಪ್ರಕಟವಾಗಲಿದೆ.

    ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.  2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.

    ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು  10/04/2024ರ ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply