Connect with us

    DAKSHINA KANNADA

    ಹಿಜಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ: ಯು.ಟಿ.ಖಾದರ್

    ಮಂಗಳೂರು, ಜೂನ್ 06: ಹಿಜಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ ಎಂದು ವಿಧಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹಿಜಬ್ ವಿದ್ಯಾರ್ಥಿನಿಯರಿಗೆ ತಿರುಗೇಟು ನೀಡಿದ್ದಾರೆ.

    ಹಿಜಬ್ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, ಸೌದಿಯಂತಹ ದೇಶಗಳಿಗೆ ಹೋಗಲಿ. ಆಗ ಅವರಿಗೆ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ ಎಂದು ಸವಾಲು ಹಾಕಿದರು.

    ನಮ್ಮ ದೇಶದಲ್ಲಿ ಬೇಕಾದ ಹಾಗೆ ಮಾತನಾಡೋದು, ಡಿಸಿಯನ್ನು ಭೇಟಿಯಾಗೋದು, ಪ್ರೆಸ್ ಮೀಟ್ ಎಲ್ಲ ಮಾಡಬಹುದು. ಆದರೆ ಅದನ್ನೇ ವಿದೇಶಕ್ಕೆ ಹೋಗಿ ಮಾತನಾಡಲಿ. ಇಲ್ಲಿ ಹುಲಿಯ ಹಾಗೆ ಇದ್ದವರು ಅಲ್ಲಿ ಬೆಕ್ಕಿನ ತರಹ ಆಗುತ್ತಾರೆ. ನಮ್ಮ ದೇಶದ ಕಾನೂನು ನೀಡಿದ ಅವಕಾಶದ ಮಹತ್ವ ಗೊತ್ತಾಗುತ್ತದೆ, ಇಲ್ಲಿ ಸಿಗುವ ಸ್ವಾತಂತ್ರ್ಯದ ಅರಿವು ಆಗುತ್ತದೆ ಎಂದು ಕಿಡಿಕಾರಿದರು.

    Share Information
    Advertisement
    Click to comment

    You must be logged in to post a comment Login

    Leave a Reply